ಮಂಡ್ಯ

ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿಯಡಿ ಮಂಡ್ಯಕ್ಕೆ ವಿವಿಧ ಗ್ಯಾರಂಟಿ; ಸಕ್ಕರೆ ಜಿಲ್ಲೆಗೆ ಕಾಂಗ್ರೆಸ್ ನೀಡಿದ ಭರವಸೆಗಳೇನು?

ಮಂಡ್ಯ: ಎಂಟು ವಿಧಾನಸಭಾ ಕ್ಷೇತಗಳನ್ನೊಳಗೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿಯಡಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಇಂದು(ಏ.21) ಮಂಡ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಅವರು, ಮಂಡ್ಯದಲ್ಲಿ ಸಾಫ್ಟ್‌ವೇರ್‌ ಪಾರ್ಕ್‌ ನಿರ್ಮಾಣ, ಪ್ರವಾಸೋದ್ಯಮ ಅಭಿವೃದ್ಧಿ, ಕೋಲ್ಡ್‌ ಸ್ಟೋರೇಜ್ ಸ್ಥಾಪನೆ, ನಾಲೆಗಳ ಆಧುನಿಕರಣ, ಹೊಸ ಸೇತುವೆ ನಿರ್ಮಾಣ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆ ಜಾರಿ, ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ, ಯುವಕರಿಗೆ ಉದ್ಯೋಗ ಸೃಷ್ಠಿ, ಹಣ್ಣು ತರಕಾರಿಗಳ ಕೋಲ್ಡ್‌ ಸ್ಟೋರೇಜ್‌ ಸ್ಥಾಪನೆ, ಮದ್ದೂರು ಪಟ್ಟಣ ನವೀಕರಣಕ್ಕೆ ಆದ್ಯತೆ, ಮಳವಳ್ಳಿಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ, ನಾಗಮಂಗಲಕ್ಕೆ ಕೆರೆ ತುಂಬಿಸುವ ಯೋಜನೆ, ಗಾರ್ಮೆಂಟ್ಸ್‌ ಸ್ಥಾಪನೆಗೆ ಒತ್ತು, ಮೇಲುಕೊಟೆ-ಪಾಂಡವಪುರಕ್ಕೆ ಸುಸ್ಥಿರ ಕೃಷಿ ಪದ್ಧತಿ ಜಾರಿ, ಪಂಚಾಯ್ತಿಗೊಂದು ಶಾಲೆ, ಶ್ರೀರಂಗಪಟ್ಟಣದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು, ಜೊತೆಗೆ ನಾಲೆಗಳ ಆಧುನಿಕರಣ, ಪ್ರತಿ ಗ್ರಾಮಕ್ಕೆ ಮೂಲಸೌಕರ್ಯ, ಕೆ.ಆರ್‌ ನಗರ ಕಬ್ಬು ಬೆಳೆಗಾರರಿಗೆ ಶಾಶ್ವತ ಪರಿಹಾರ ಸೇರಿದಂತೆ ಹತ್ತು ಹಲವು ಗ್ಯಾರಂಟಿಗಳನ್ನು ಕಾಂಗ್ರೆಸ್‌ ಘೋಷಿಸಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

3 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

3 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

3 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

5 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

6 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

6 hours ago