Mysore
23
light rain

Social Media

ಗುರುವಾರ, 21 ಮೇ 2026
Light
Dark

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು.

ಕನ್ನಡ ಸೇನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌, ವಾಟಾಳ್‌ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್‌ ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಸ್ಥಿತಿಗತಿ ಶೋಚನೀಯವಾಗಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಆಡಳಿತ ನಡೆಸುವ ಸರ್ಕಾರಕ್ಕೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಯಾಕೆ ಮೀನಾಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್‌ ಸೇರಿದಂತೆ ಹಲವು ಹೋರಾಟಗಾರರು ಬಂಧನಕ್ಕೆ ಒಳಗಾದರು.

 

Tags:
error: Content is protected !!