ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು.
ಕನ್ನಡ ಸೇನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ವಾಟಾಳ್ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಸ್ಥಿತಿಗತಿ ಶೋಚನೀಯವಾಗಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಆಡಳಿತ ನಡೆಸುವ ಸರ್ಕಾರಕ್ಕೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಯಾಕೆ ಮೀನಾಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಹಲವು ಹೋರಾಟಗಾರರು ಬಂಧನಕ್ಕೆ ಒಳಗಾದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…