ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ ವಾಟಾಳ್ ನಾಗರಾಜ್ ಅವರು, ರಾಜ್ಯ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಸ್ಥಿತಿ ಶೋಚನೀಯವಾಗಿದ್ದು, ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಶಾಲೆಗಳನ್ನು ಉಳಿಸಬೇಕು. ಕನ್ನಡ ಶಾಲೆಗಳ ಬಗ್ಗೆ ತಾತ್ಸಾರ ತೋರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.





