ಮಂಡ್ಯ

ವಿವಿಧ ಬೇಡಿಕೆ ಒತ್ತಾಯಿಸಿ ರಾಜ್ಯಾದ್ಯಾಂತ ಈಡುಗಾಯಿ ಒಡೆಯುವ ಚಳವಳಿ ; ವಾಟಾಳ್‌ ನಾಗರಾಜ್‌

ಮಂಡ್ಯ: ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರಂತರ ಒತ್ತಾಯ ಮಾಡುತ್ತಿದ್ದೇವೆ. ಜತೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದರು ಪ್ರಯೋಜನ ಆಗಿಲ್ಲ. ಹೀಗೆ ರಾಜ್ಯದಲ್ಲಿ ಅನೇಕ ಬೇಡಿಕೆಗಳಿಗೆ ಒತ್ತಾಹಿಸಿ ಏ.26ಕ್ಕೆ ರಾಜ್ಯಾದ್ಯಂತ ಈಡುಗಾಯಿ ಒಡೆಯುವ ಚಳವಳಿ ಹಮ್ಮಿಕೊಳಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರಂತರ ಒತ್ತಾಯ ಮಾಡಲಾಗುತ್ತಿದ್ದು, ೧೯೫೬ರಲ್ಲಿ ಕರ್ನಾಟಕ ಏಕೀಕರಣ ಸಂದರ್ಭದಿಂದಲೂ ಹೋರಾಟ ಮಾಡಲಾಗಿದೆ. ಆದರೂ ಅಂದಿನಿಂದ ಎಲ್ಲ ಬೇಡಿಕೆಗಳು ಬೇಡಿಕೆಗಳಾಗಿಯೇ ಉಳಿದಿವೆ ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದರು ಪ್ರಯೋಜನ ಆಗಿಲ್ಲ. ಎಂಇಎಸ್ ರಾಜ್ಯದ ಗಡಿನಾಡಿಗೆ ಮಾರಕ. ಎಂಇಎಸ್ ನಿಷೇಧಕ್ಕೆ ಹಲವು ವರ್ಷಗಳಿಂದ ಹೋರಾಟ ಕನ್ನಡಿಗರು, ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಇಂದಿಗೂ ಅದನ್ನು ಯಾವುದೇ ರಾಜ್ಯ ಸರ್ಕಾರ ಇಡೇರಿಸಿಲ್ಲ ಎಂದು ಗುಡುಗಿದರು.

ಕಳಸಬಂಡೂರಿ, ಮೇಕೆದಾಟು ಜಾರಿಯಾಗಿಲ್ಲ, ರಾಜ್ಯದಲ್ಲಿ ಪರಭಾಷಿಕರ ಹಾವಳಿ ಎಲ್ಲೆಡೆ ಹೆಚ್ಚಾಗಿದೆ. ಪರಭಾಷಿಕರಿಂದ ಅಪರಾಧ ಕೃತ್ಯಗಳೂ ಹೆಚ್ಚಾಗಿವೆ. ಈ ಬಗ್ಗೆ ಸರ್ಕಾರ ಗಂಭೀರ ಚಿಂತನೆ ಮಾಡಬೇಕು ಎಂದು ಒತ್ತಾಯಿಸಿದ ವಾಟಾಳ್ ನಾಗರಾಜ್ ಕನ್ನಡಿಗರಿಗೆ ಉದ್ಯೋಗದ ಬಗ್ಗೆ ಕ್ರಮ ಕೈಗೊಂಡಿಲ್ಲ, ಅದಕ್ಕೆ ಪೂರಕವಾದ ಸರೋಜಿನಿಮಹಿಷಿ ವರದಿ ಜಾರಿಯಾಗಿಲ್ಲ. ಐಟಿಬಿಟಿ ಮಸೂದೆ ಜಾರಿಯಾಗಿಲ್ಲ. ಈ ಬಗ್ಗೆಯೂ ಗಂಭೀರ ಚಿಂತನೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ಕಳೆದ ಮಾರ್ಚ್ ೨೨ರಂದು ಬಂದ್ ಕರೆ ಕೊಟ್ಟಿದ್ದೆವು. ಮಂಡ್ಯದಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಕ್ಕೆ ಮಂಡ್ಯ ಜನಕ್ಕೆ ಧನ್ಯವಾದ ಹೇಳುತ್ತೇನೆ. ಇದೇ ಏ.೨೬ಕ್ಕೆ ರಾಜ್ಯದ ಉದ್ದಗಲಕ್ಕೂ ಈಡುಗಾಯಿ ಒಡೆಯುವ ಚಳವಳಿ ಮೂಲಕ ವಿಶೇಷ, ವಿನೂತನವಾಗಿ ಮತ್ತೊಂದು ಹೋರಾಟ ಮಾಡಲಾಗುತ್ತಿದ್ದು, ಎಂಇಎಸ್ ನಿಷೇಧ. ಉತ್ತರ ಕರ್ನಾಟಕ ಅಭಿವೃದ್ಧಿ, ಪರಭಾಷಿಕರ ದಬ್ಬಾಳಿಕೆ, ಪರಭಾಷಿಕರ ಚಿತ್ರಗಳ ಬಹಿಷ್ಕಾರ, ಕೇಂದ್ರದ ಮಲತಾಯಿ ಧೋರಣೆ, ಬಜೆಟ್‌ನಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯ ಖಂಡಿಸಿ ಕನ್ನಡಿಗರ ಬೇಡಿಕೆ ಈಡೇರಿಕೆಗಾಗಿ ಕನಿಷ್ಠ ಎರಡು ಕೋಟಿ ಈಡುಗಾಯಿ ಒಡೆಯುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಜಾತಿಗಣತಿ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಇವತ್ತಿನವರೆಗೂ ಜಾತಿ ಬಗ್ಗೆ ಮಾತಾಡಿಲ್ಲ.ಅದನ್ನ ಯಾಕೆ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ. ರಾಜ್ಯ ಉದಯವಾಗಿದ್ದು ಭಾಷೆ ಮೇಲೆ. ಭಾಷೆ ಮೇಲೆ ಕರ್ನಾಟಕದ ಉದಯವಾಯಿತು. ಕುವೆಂಪು ಅವರು ಮೈಸೂರಿನಲ್ಲಿ ಸಮಗ್ರ ಕರ್ನಾಟಕ ಆಗಬೇಕು ಎಂದಿದ್ದರು. ಆದರೆ ಇವತ್ತು ಜಾತಿಯ ಕರ್ನಾಟಕ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಸವಣ್ಣ, ಕನಕದಾಸರ ಸಂದೇಶಗಳನ್ನ ಅರ್ಥ ಮಾಡಿಕೊಳ್ಳಬೇಕು. ಒಂದು ಪಕ್ಷ ಅಲ್ಲ, ಎಲ್ಲಾ ಪಕ್ಷಗಳು ಜಾತಿ ಹಿಂದೆ ಬಿದ್ದಿವೆ. ಸಿದ್ದರಾಮಯ್ಯನವರೇ ಕರ್ನಾಟಕದ ಕೊನೆಯ ಕೊಂಡಿ. ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಏನಾಗುತ್ತೋ ಗೊತ್ತಿಲ್ಲ. ಮುಂದೆ ಬರುವವರು ಯಾವ ಯಾವ ಆಧಾರದಲ್ಲಿ ಅಧಿಕಾರಕ್ಕೆ ಬರುತ್ತಾರೋ ಗೊತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಶಾಸನ ಸಭೆಯಲ್ಲಿ ಈ ವಿಷಯ ಚರ್ಚೆ ಬೇಕೆ?. ಶಾಸನಸಭೆಯ ಗಂಭೀರತೆ ಏನಾಗಬೇಕು?. ವಿಧಾನಸಭೆ, ಪರಿಷತ್ತಿನ ಘನತೆ, ಗಾಂಭೀರ್ಯ ಕುಸಿಯುತ್ತಿದೆ. ಎಲ್ಲರೂ ದುಡ್ಡಿನ ಮೇಲೆ ಅಧಿಕಾರಕ್ಕೆ ಬರುವವರೇ ಆಗಿದ್ದಾರೆ. ವಿಧಾನಪರಿಷತ್ತು ವ್ಯಾಪಾರೀಕರಣ ಆಗುತ್ತಿದೆ. ಪರಿಷತ್ತಿಗೆ ನಾಲ್ಕು ಸ್ಥಾನಗಳಿಗೆ ನಾಮಕರಣ ಆಗಬೇಕಿದೆ. ಅದನ್ನೂ ಹಂಚಿಕೆ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಪಾರ್ಥ ಸಾರಥಿ, ಮಂಜುನಾಥ್ ಬೆಟ್ಟಹಳ್ಳಿ, ಹೆಚ್.ಸಿ.ಮಂಜುನಾಥ್ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

7 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

7 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

7 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

8 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

8 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

8 hours ago