Mysore
31
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯಕ್ಕೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭೇಟಿ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು.

ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ ಕುಮಾರ,‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:
error: Content is protected !!