Mysore
28
few clouds

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಸಕ್ಕರೆ ನಾಡು ಮಂಡ್ಯಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌

ಮಂಡ್ಯ: ಸಕ್ಕರೆ ನಾಡು ಮಂಡ್ಯಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.

ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಇಂದು ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್‌ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಹೂ ಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:
error: Content is protected !!