ಮಂಡ್ಯ

ಸ್ಮಶಾನ ಒತ್ತುವರಿ ಆರೋಪ : ವ್ಯಕ್ತಿ ವಿರುದ್ಧ ಜಿಲ್ಲಾಧಿಕಾರಿಗೆ ಗ್ರಾಮಸ್ಥರ ದೂರು

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಹೋಬಳಿಯ ಚೆನ್ನನಕೆರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿರುವ ಸರ್ವೆ ನಂ.78 ರಲ್ಲಿರುವ ಸ್ಮಶಾನವನ್ನು ಜೆ.ಆರ್.ಬಾಲಕೃಷ್ಣ ಎಂಬ ವ್ಯಕ್ತಿ ಅಕ್ರಮವಾಗಿ ಒತ್ತುವರಿ ಮಾಡಿ, ಗಣಿಗಾರಿಕೆ ಮಾಡಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಜಿಲ್ಲಾಧೀಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಚೆನ್ನನಕೆರೆ ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಸರ್ಕಾರವು 1997-98ನೇ ಸಾಲಿನಲ್ಲಿ ಸರ್ವೆ ನಂ.78 ರಲ್ಲಿ 1.19 ಎಕರೆ ಜಾಗವನ್ನು ಪರಿಶಿಷ್ಟ ಸಮುದಾಯದ ಸ್ಮಶಾನಕ್ಕೆ ಮಂಜೂರು ಮಾಡಿದೆ. ಜಕ್ಕನಹಳ್ಳಿ ಗ್ರಾಮದ ಜೆ.ಆರ್ ಬಾಲಕೃಷ್ಣ ಎಂಬವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಸರ್ವೆ ನಂ.78ರಲ್ಲಿ ಪರವನಾಗಿ ಎಸ್.ವೈ. ನಂ.-78, ಕ್ಯೂಎಲ್-333 ಮತ್ತು ಕ್ಯೂಎಲ್-605 ರಲ್ಲಿ ಗಣಿಗಾರಿಕೆ ಮಾಡಲು ಪರವಾನಗಿ ಕೊಟ್ಟಿರುತ್ತಾರೆ. ಆದರೆ, ಬಾಲಕೃಷ್ಣ ಅವರು ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚುವರಿಯಾಗಿ ಅತಿಕ್ರಮಣ ಮಾಡಿಕೊಂಡು ಗಣಿಗಾರಿಕೆ ಮಾಡುತ್ತಿದ್ದಾರೆ. ಇದರ ಜತೆ ಇದೇ ಸರ್ವೆ ನಂ.78 ರಲ್ಲಿ ಪರಿಶಿಷ್ಟ ಸಮುದಾಯದ ಸ್ಮಶಾನದಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ್ದಾರೆ. ಅಲ್ಲದೆ, ಪರವನಾಗಿ ಪಡೆಯದೆ ಸರ್ಕಾರಕ್ಕೆ ಸೇರಿದ 4 ರಿಂದ 5 ಎಕರೆ ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ಮಾಡಿ ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.

ಇದೇ ವೇಳೆ ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಲಿಂಗರಾಜು, ಆರ್.ಮಹದೇವ್, ಮದನ್, ಭರತ್, ಪ್ರಜ್ವಲ್, ಸಿ.ಎಲ್. ಕೃಷ್ಣ, ಸಿ.ಕೆ. ನಿಂಗರಾಜು, ಮಹದೇವು, ಸಂತೋಷ್ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

36 mins ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

48 mins ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

2 hours ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

2 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

4 hours ago