ಮಂಡ್ಯ

ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್‌ಗೆ ಮತ ನೀಡಿ: ಚಲುವರಾಯಸ್ವಾಮಿ

ಮಂಡ್ಯ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ವಿವಿಧ ಯೋಜನೆಗಳನ್ನು ಜಿಲ್ಲೆಗೆ ತಂದು ಅಭಿವೃದ್ಧಿ ಮಾಡಿದ್ದೇವೆ, ಈ ಅವಧಿಯಲ್ಲೇ ಜಿಲ್ಲೆಗೆ ಶಾಶ್ವತ ಯೋಜನೆ ನೀಡಲಾಗುವುದು ಎಂದು ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿಕೆ ನೀಡಿದರು.

ನಗರದಲ್ಲಿ ನಡೆದ ಪ್ರಜಾಧ್ವನಿ 2 ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಿ ಎಂದು ಮನವಿ ಮಾಡಿದರು. ಕೇಂದ್ರದಲ್ಲಿ ಆಡಳಿತ ನಡೆಸಿದ ಮೋದಿ ಹತ್ತು ವರ್ಷ ಸುಳ್ಳನ್ನೇ ಹೇಳಿದರು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಡೀ ದೇಶವನ್ನು ಸುತ್ತಾಡಿ ದೇಶದ ಸಮಸ್ಯೆಗಳನ್ನು ಕಂಡು ಪರಿಹಾರ ನೀಡುವಲ್ಲಿ ಶ್ರಮಿಸುತ್ತಿದ್ದಾರೆ. ಆವರ ಕೈ ಬಲಪಡಿಸಬೇಕಿದೆ. ಆಗಾಗಿ ಜಿಲ್ಲೆಯ ಜನ ವೆಂಕಟರಮಣೇಗೌಡ ಅವರನ್ನು ಗೆಲ್ಲಿಸುವ ಮೂಲಕ ರಾಹುಲ್‌ ಗಾಂಧಿಗೆ ಶಕ್ತಿ ತುಂಬಬೇಕು ಎಂದರು.

ಅಧಿಕಾರದಲ್ಲಿದಾಗ ಮೇಕೆದಾಟ ಯೋಜನೆಯನ್ನು ಕೀಳಾಗಿ ಕಂಡವರು ಇಂದು ಮೇಕೆದಾಟಿನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿಗೆ ಟೀಕಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ಜಿಲ್ಲೆಗೆ ನೂರಾರು ಕೋಟಿ ಅನುದಾನ ತಂದಿದ್ದೇವೆ. ಕೆಆರ್‌ಎಸ್‌ನ್ನು ವಿಶ್ವದರ್ಜೆಗೆ ಏರಿಸಿದ್ದೇವೆ. ನಾಲೆಗಳ ಆಧುನಿಕರಣ ಮಾಡಿದ್ದೇವೆ. ವಿಶ್ವವಿದ್ಯಾಲಯ ಘೋಷಿಸಿದ್ದೇವೆ ಎಂದು ಕಾಂಗ್ರೆಸ್‌ನ ಅಭಿವೃದ್ಧಿಯ ಬಗ್ಗೆ ವಿವರಿಸಿದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

14 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

15 hours ago