Mysore
25
overcast clouds

Social Media

ಗುರುವಾರ, 25 ಜೂನ್ 2026
Light
Dark

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ ಮೇಲೆ ಬಿದ್ದರೂ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಪೂರಿಗಾಲಿ ಗ್ರಾಮ ವ್ಯಾಪ್ತಿಯಲ್ಲಿ ೪.೯೫ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯಲ್ಲಿರುವ ಕಟ್ಟಡಗಳ ನೆಲಸಮದೊಂದಿಗೆ ಕಾಮಗಾರಿ ಭರದಿಂದ ಸಾಗಿದೆ. ಗುರುವಾರ ಹಿಟಾಟಿಯಿಂದ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆಗಳು ಹಿಟಾಚಿ ಮೇಲೆ ಬಿದ್ದಿವೆ. ಆದರೆ, ಅದರೊಳಗಿದ್ದ ಚಾಲಕನಿಗೆ ಯಾವುದೇ ಗಂಭೀರ ಗಾಯವಾಗದೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಕಟ್ಟಡದ ಗೋಡೆಗಳು ಹಿಟಾಚಿಯಂತ್ರದ ಮೇಲೆ ಬಿದ್ದಿದ್ದನ್ನು ನೋಡಿದ ಜನರು ಗಬಾರಿಯಾದರು. ಕೂಡಲೇ ಗೋಡೆಯ ಅವಶೇಷಗಳನ್ನು ತೆರವುಗೊಳಿಸಿ ಚಾಲಕನನ್ನು ರಕ್ಷಿಸಲಾಗಿದೆ.

Tags:
error: Content is protected !!