Mysore
24
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಕೆಆರ್‌ಎಸ್ ಡ್ಯಾಂನಿಂದ ಮತ್ತೆ ತಮಿಳುನಾಡಿಗೆ ನೀರು

ಮಂಡ್ಯ : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಬೆನ್ನಲ್ಲೇ ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನದಿ ಮೂಲಕ ತಮಿಳುನಾಡಿಗೆ ಮಂಗಳವಾರ ರಾತ್ರಿಯಿಂದಲೇ 5000 ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ.

ಕೆಆರ್‌ಎಸ್ ಡ್ಯಾಂನ +80ರ ಗೇಟ್ ಮೂಲಕ ನೀರನ್ನು ಹರಿಸಲಾಗುತ್ತಿದೆ. ರೈತರ ಆಕ್ರೋಶದ ನಡುವೆ ರಾತ್ರಿಯಿಂದಲೇ 7,380 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ನೀರು ಬಿಡುಗಡೆಯಿಂದ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಕುಸಿಯಲಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಕಾವು ಹೆಚ್ಚಾಗುವ ಸಾಧ್ಯತೆ ಇದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!