Mysore
21
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

103 ಅಡಿ ತಲುಪಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ರೈತರ ಮೊಗದಲ್ಲಿ ಮಂದಹಾಸ

krs reservoir

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದ ಸುತ್ತಮುತ್ತ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಇಂದಿನ ಒಳಹರಿವು 17 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 735 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 103.00 ಅಡಿಗಳಾಗಿದೆ.

49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 25.851 ಟಿಎಂಸಿ ನೀರು ಸಂಗ್ರಹವಾಗಿದೆ. ಮಳೆ ಹೀಗೆಯೇ ಮುಂದುವರಿದರೆ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಡ್ಯಾಂ ಆದಷ್ಟು ಬೇಗ ಭರ್ತಿಯಾಗಲಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:
error: Content is protected !!