ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಡ್ಯಾಂ ಗೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.
24 ಗಂಟೆಗಳಲ್ಲಿ ಕೆಆರ್‌ಎಸ್ ಡ್ಯಾಂಗೆ 4 ಟಿಎಂಸಿ ನೀರು ಹರಿದು ಬಂದಿದ್ದು, ಡ್ಯಾಂನಲ್ಲಿ ಸದ್ಯ 26.811 ಟಿಎಂಸಿ ನೀರು ಸಂಗ್ರಹವಾಗಿದೆ.
ಮಂಗಳವಾರ ಕೆಆರ್‌ಎಸ್ ಡ್ಯಾಂನಲ್ಲಿ 22.809 ಟಿಎಂಸಿ ನೀರು ಸಂಗ್ರಹವಾಗಿತ್ತು. ಇದೀಗ ಕೆಆರ್‌ಎಸ್‌ನ ನೀರಿನ ಮಟ್ಟ 104.80 ಅಡಿಗೆ ಹೆಚ್ಚಳವಾಗಿದೆ. ಡ್ಯಾಂಗೆ 51,508 ಕ್ಯೂಸೆಕ್ ಒಳ ಹರಿವು ಇದ್ದು, ಡ್ಯಾಂನಿಂದ 5,156 ಕ್ಯೂಸೆಕ್‌ನಷ್ಟು ಹೊರಹರಿವು ಇದೆ.