ಮಂಡ್ಯ: ಕೆ.ಆರ್.ಎಸ್ ಅಣೆಕಟ್ಟೆಯು 120 ಅಡಿ ತಲುಪಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತೆ ದೃಷ್ಠಿಯಿಂದ ಭಾರೀ ಪ್ರಮಾಣದ ನೀರನ್ನು ನದಿಗಳಿಗೆ ಶನಿವಾರ ಬೆಳಿಗ್ಗೆಯಿಂದ ಹರಿಸಲಾಗುತ್ತಿದೆ.
ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಕುಮಾರ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಜಿಲ್ಲೆಯ ಬೆಳಗೊಳದ ಬಲಮುರಿ ಫಾಲ್ಸ್‌ಗೆ ಭೇಟಿ ನೀಡಿ ಬ್ಯಾರಿಕೇಡ್ ಹಾಗೂ ಸಾರ್ವಜನಿಕ ಪ್ರಕಟಣೆ ಪೋಸ್ಟರ್‌ಗಳನ್ನು ಹಾಕುವ ಮೂಲಕ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ, ಕೆಆರ್‌ಎಸ್ ಇನ್ನಷ್ಟು ಅಪಾಯ ಮಟ್ಟ ಮೀರಿ ಹರಿಯಲಿದೆ. ಹಾಗಾಗಿ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ.

ಈ ಸಂದರ್ಭದಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ, ಜಿಲ್ಲಾ ಪಂಚಾಯತ್ ಸಿಇಒ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.





