N. Chaluvaraya Swamy
ಮಂಡ್ಯ : ನಮಗೆ ಧರ್ಮಸ್ಥಳ ಕ್ಷೇತ್ರದ ಮೇಲೆ ಗೌರವವಿದೆ, ನ್ಯಾಯಾಲಯ ಆದೇಶದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.
ಶುಕ್ರವಾರ ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕರ ಅಭಿಪ್ರಾಯವನ್ನು ಗೌರವಿಸಬೇಕು. ಧರ್ಮಸ್ಥಳದ ಧಾರ್ಮಿಕ ವಿಚಾರಕ್ಕೆ ಬಂದರೆ ವಿರೋಧ ಪಕ್ಷಗಳಿಗಿಂತ ಹೆಚ್ಚು ನಂಬಿಕೆ ನಮಗಿದೆ ಹಾಗೂ ಕಾನೂನಿನ ಪ್ರಕಾರವೇ ನಡೆದುಕೊಳ್ಳಬೇಕಾಗುತ್ತದೆ, ನಮ್ಮ ಸರ್ಕಾರಕ್ಕೆ ಧರ್ಮಸ್ಥಳ ಹಾಗೂ ಅಲ್ಲಿನ ಮಾಲೀಕರ ಬಗ್ಗೆ ಯಾವುದೇ ಅಸಮಧಾನ ಇಲ್ಲ ಎಂದು ಹೇಳಿದರು.
ಬಿಜೆಪಿ ಪಕ್ಷದ ಸದ್ಯದ ಪರಿಸ್ಥಿತಿ ಸರಿಯಿಲ್ಲ. ಅವರಿಗೆ ಯಾವುದೇ ಗಂಭೀರ ಪ್ರಕರಣ ಸಿಕ್ಕಿಲ್ಲ ಹಾಗಾಗಿ ರಾಜಣ್ಣ ವಿಚಾರ ತೆಗೆದುಕೊಂಡಿದ್ದಾರೆ. ರಾಜಣ್ಣ ಅವರನ್ನು ಯಾಕೆ ಕೈ ಬಿಟ್ಟಿದ್ದಾರೆ ಎಂದು ನಮ್ಮ ಪಕ್ಷಕ್ಕೆ ಗೊತ್ತಿದೆ. ರಾಜಣ್ಣ ನಾವು ಎಲ್ಲರೂ ಚನ್ನಾಗಿ ಇದ್ದೇವೆ. ಮೊದಲು ಬಿಜೆಪಿಯ ತನ್ನ ಒಳ ಜಗಳ ಸರಿ ಪಡಿಸಿಕೊಳ್ಳಲಿ. ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕರನ್ನು ಬದಲಾವಣೆ ಮಾಡಲು ಸಾಧ್ಯವಾಗುತ್ತಿಲ್ಲ ಮೊದಲು ಅವರು ಅದನ್ನು ಸರಿ ಪಡಿಸಿಕೊಳ್ಳಲಿ ಎಂದು ಹೇಳಿದರು.
ರಾಜಣ್ಣ ಅವರ ಸಚಿವ ಸ್ಥಾನ ಯಾರಿಗೆ ಕೊಡುತ್ತಾರೆ ಎಂದು ತಿಳಿದಿಲ್ಲ ಅದು ಹೈಕಮಾಂಡ್ ತೀರ್ಮಾನ. ಆದರೆ ಅದು ಮಂಡ್ಯಗೆ ಸಿಗಲಿ ಎಂಬ ಆಸೆ ಇದೆ. ಎಂ.ಪಿ. ನರೇಂದ್ರಸ್ವಾಮಿ ಅವರು ಸಚಿವ ಸ್ಥಾನ ನೀಡಿ ಎಂದು ನಾವು ಕೇಳಿದ್ದೇವೆ. ನರೇಂದ್ರಸ್ವಾಮಿ ಸಚಿವರಾಗಬೇಕೆಂಬ ಆಸೆ ಇದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ರಸಗೊಬ್ಬರ ಕಡಿಮೆ ಸರಬರಾಜು ಆಗಿರೋದು ಸತ್ಯ. ನಿನ್ನೆ ಶಿವರಾಜ್‌ಕುಮಾರ್ ಚೌಹಾಣ್ ರವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯದ ಎಲ್ಲಾ ಸಚಿವರು ಭಾಗಿಯಾಗಿದ್ದೇವು, ದೇಶದ ಎಲ್ಲಾ ರಾಜ್ಯಗಳಿಗೂ ಗೊಬ್ಬರ ಕಡಿಮೆ ಸರಬರಾಜು ಆಗಿದೆ. ಇದಕ್ಕೆ ನೇರ ಕಾರಣ ಕೇಂದ್ರ ಸರ್ಕಾರ. ನಮಗೆ ಕಡಿಮೆ ರಸಗೊಬ್ಬರ ಸರಬರಾಜು ಆಗಿದ್ದರು ರಾಜ್ಯದಲ್ಲಿ ರಸಗೊಬ್ಬರ ಕೊರತೆ ಉಂಟಾಗದಂತೆ ನಿರ್ವಹಣೆ ಮಾಡಲಾಗುತ್ತಿದೆ ಎಂದರು.
ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಗೋಲಿಬಾರ್ ಆಗಿದೆ. ಅವರು ಇದನ್ನು ರಾಜಕೀಯವಾಗಿ ಬಳಕೆ ಮಾಡ್ತಾ ಇದ್ದಾರೆ. ಮುಂಗಾರು ಬೇಗ ಆರಂಭವಾಗಿರುವ ಕಾರಣ ರೈತರು ಗೊಬ್ಬರಕ್ಕೆ ಮುಗಿಬಿದ್ದಿದ್ದಾರೆ. ಕೇಂದ್ರಕ್ಕೆ ಹೀಗಾಗಲೇ ರಾಜ್ಯದ ಪರಿಸ್ಥಿತಿಯ ಕುರಿತು ನಾವು ಮನವರಿಕೆ ಮಾಡಿದ್ದೇವೆ ಎಂದರು.
ರೈತರು ಯೂರಿಯಾವನ್ನು ಹೆಚ್ಚು ಬಳಕೆ ಮಾಡುವುದರಿಂದ ಮಣ್ಣಿನ ಫಲವತ್ತತೆ ಹಾಗೂ ಬೆಳೆಯ ಗುಣಮಟ್ಟ ಕುಂದುತ್ತದೆ ಆದ್ದರಿಂದ ರೈತರು ನ್ಯಾನೋ ಯೂರಿಯಾವನ್ನು ಬಳಕೆ ಮಾಡಿ ಬೆಳೆಯೂ ಉತ್ತಮವಾಗುತ್ತದೆ ಜೊತೆಗೆ ಯೂರಿಯಾ ಸಮಸ್ಯೆಯು ಸಹ ಉದ್ಭವಿಸುವುದಿಲ್ಲ ಎಂದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ದರ್ಶನ್ ವಿಚಾರದಲ್ಲೂ ಎನೂ ಮಾಡಲು ಸಾಧ್ಯವಿಲ್ಲ ಎಂದು ಜನರು ನಂಬಿದ್ದರು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಭಾಗಲೆ ಬೇಕು. ದರ್ಶನ್ ವಿಚಾರದಲ್ಲಿ ಕೊಲೆ ಆಗಿದ್ಯೋ ಇಲ್ಲವೊ ಕೋರ್ಟ್ ತೀರ್ಮಾನ ಮಾಡುತ್ತೆ. ಸುಪ್ರೀಂ ಕೋರ್ಟ್ ದರ್ಶನ್ ರವರ ಬೇಲ್ ರದ್ದು ಗೊಳಿಸಿದೆ ಈ ಮೂಲಕ ನ್ಯಾಯಾಲಯ ಸೂಕ್ತ ತೀರ್ಪು ನೀಡುತ್ತದೆ ಎಂಬ ಭರವಸೆ ಉಳಿಸಿಕೊಂಡಿದೆ ಎಂದು ಅಭಿಪ್ರಾಯಪಟ್ಟರು.
ಪತ್ರಿಕಾ ಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ, ಮೈ ಶುಗರ್ ಅಧ್ಯಕ್ಷ ಸಿ ಡಿ ಗಂಗಾಧರ್ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…