ಮಂಡ್ಯ

ನಾವು ಬಲವಂತವಾಗಿ ಆರ್‌ಸಿಬಿ ವಿಜಯೋತ್ಸವ ಮಾಡಿಲ್ಲ : ಶಾಸಕ ರವಿಕುಮಾರ್‌

ಮಂಡ್ಯ : ಕಾರ್ಯಕ್ರಮ ಇದ್ದಾಗ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ. ಲಾಠಿ ಹಿಡಿದು ನಿಂತ್ಕೊಳೋದು ನಮ್ ಜವಾಬ್ದಾರಿ ಅಲ್ಲ. ಇಂಟಲಿಜೆನ್ಸಿ ಬಳಸಿ ಸೆಕ್ಯೂರಿಟಿ ಕೊಡಬೇಕಾದದ್ದು ಪೊಲೀಸರ ಕರ್ತವ್ಯ. ನಾವು ಬಲವಂತವಾಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಮಾಡಿದ್ದಲ್ಲ ಎಂದು ಶಾಸಕ ಪಿ.ರವಿಕುಮಾರ್ ಸಮರ್ಥಿಸಿಕೊಂಡರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಸಿಎ ಮತ್ತು ಆರ್‌ಸಿಬಿ ಅವರು ಸಿಎಂ ಬಳಿ ವಿಧಾನಸೌಧದ ಎದುರು ವಿಜಯೋತ್ಸವ ಮಾಡುವಂತೆ ಕೇಳಿಕೊಂಡಿದ್ದರು. ನಂತರ ಸಿಎಂ ಸಿದ್ದರಾಮಯ್ಯ ಅದಕ್ಕೆ ಒಪ್ಪಿ ಕಾರ್ಯಕ್ರಮ ಮಾಡಿದ್ದಾರೆ. ಬಿಜೆಪಿಯವರಿಗೆ ಮಾಡೋಕೆ ಏನೂ ಕೆಲಸ ಇಲ್ಲ. ಹಾಗಾಗಿ ವೃಥಾ ಆರೋಪ ಮಾಡುತ್ತಿದ್ದಾರೆ ಎಂದರು.

ಡಾ. ರಾಜಕುಮಾರ್ ಅವರು ಮೃತಪಟ್ಟಾಗ ಯಾರೂ ಗಲಾಟೆ ಮಾಡ್ತಿರಲಿಲ್ಲ. ನನ್ನ ಕಣ್ಣ ಮುಂದೆ ಗುಂಡು ಹೊಡೆದರು. ಅಂದು ನನ್ನ ಕಣ್ಣಲ್ಲಿ ೪ ಹೆಣ ನೋಡಿದ್ದೀನಿ. ಬಿಜೆಪಿಯವರು ಸುಮ್ಮನೆ ಇದರ ಬಗ್ಗೆ ಮಾತನಾಡಬಾರದು. ಅವತ್ತು ವೈಫಲ್ಯ ಆಗಿರಲಿಲ್ವಾ ? ಯಾಕೆ ಅಭಿಮಾನಿಗಳಿಗೆ ಗುಂಡು ಹೊಡೆದರು? ಅವತ್ತು ಎಚ್‌ಡಿಕೆಗೆ ನೆನಪಿರಲಿಲ್ವಾ ಸೆಕ್ಯೂರಿಟಿ ಕೊಡಬೇಕು ಅಂತ ಎಂದು ಪ್ರಶ್ನಿಸಿದರು.

ಸಾವಿನ ಮೇಲೆ ರಾಜಕಾರಣ ಮಾಡುವುದು ಬಿಜೆಪಿಯವರ ಹುಟ್ಟುಗುಣ ಎಂದು ಛೇಡಿಸಿದರು. ನಾನು ಸಚಿವಕಾಂಕ್ಷಿಯಲ್ಲ ಸಂಪುಟ ಪುನರ್ ರಚನೆ ಊಹಾಪೋಹ. ಯಾವುದೇ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾನು ಮಂತ್ರಿಗಿರಿ ಆಕಾಂಕ್ಷಿ ಅಲ್ಲ. ಮೊದಲ ಬಾರಿಗೆ ಶಾಸಕ ಆಗಿದ್ದೀನಿ, ಒಳ್ಳೆಯ ಕೆಲಸ ಮಾಡ್ತೀನಿ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಬದಲಾವಣೆ ವಿಚಾರ ನಮ್ಮ ಪಕ್ಷದಲ್ಲಿ ಚರ್ಚೆ ಆಗಿಲ್ಲ. ಎಲ್ಲವೂ ಊಹಾಪೋಹ.

ಆಂದೋಲನ ಡೆಸ್ಕ್

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

10 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

10 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

11 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

11 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

11 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

11 hours ago