We have always responded to the publics distress N Chaluvarayaswamy
ಮಂಡ್ಯ : ಸರ್ಕಾರವು ಸದಾ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸದಲ್ಲಿ ನಿರತವಾಗಿದೆ. ಆದರೆ ಅದನ್ನು ಪ್ರಚಾರ ಮಾಡುವ ಕೆಲಸದಲ್ಲಿ ಹಿಂದುಳಿದಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಕೆ.ಆರ್.ಎಸ್. ಜಲಾಶಯಕ್ಕೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಬಾಗಿನ ಅರ್ಪಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಂಚ ಗ್ಯಾರಂಟಿಗಳನ್ನು ಸರ್ಕಾರ ಘೋಷಿಸಿದ ಸಂದರ್ಭದಲ್ಲಿ ವಿಪಕ್ಷಗಳು ಆರ್ಥಿಕ ಸ್ಥಿತಿಗತಿ ತಿಳಿಯದೆ ಸರ್ಕಾರ ಗ್ಯಾರಂಟಿ ಘೋಷಿಸಿದೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವುದು ಕಷ್ಟ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದು ಟೀಕೆ ವ್ಯಕ್ತಪಡಿಸಿದರು. ಆದರೆ ಇಂದು ಪಂಚ ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ತೊಂದರೆ ಉಂಟಾಗದಂತೆ ಪಂಚ ಗ್ಯಾರಂಟಿಗಳು ಯಶಸ್ವಿಯಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರ 16 ವರ್ಷಗಳ ಆಯವ್ಯಯ ಮಂಡನೆಯ ಅನುಭವದೊಂದಿಗೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಕಂಡಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಅಧಿಕಾರಕ್ಕೆ ಬಂದಾಗ ರಾಜ್ಯ ಬರಗಾಲ ಪೀಡಿತವಾಗುತ್ತದೆ ಎಂದು ವಿಪಕ್ಷಗಳು ಟೀಕಿಸುತ್ತಾ ಬರುತ್ತಿದ್ದವು ಆದರೆ ಇಂದು ಇದೆ ಸಿದ್ದರಾಮಯ್ಯ ನವರು ಆಡಳಿತಾವಧಿಯಲ್ಲಿ ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ತಿಳಿಸಿದರು.
93 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್ ಮಾಹೆಯಲ್ಲಿ ಕೆ.ಆರ್.ಎಸ್ ಜಲಾಶಯ ಭರ್ತಿಯಾಗಿದೆ, ಇದು ಸಂತಸದ ವಿಷಯವಾಗಿದೆ. ಕೆ.ಆರ್.ಎಸ್ ನೊಂದಿಗೆ ಎಲ್ಲಾ ಜಲಾಶಯಗಳು ಭರ್ತಿಯಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದೆ. ಇದು ಸಂತೋಷದ ವಿಷಯವಾಗಿದೆ ಎಂದರು.
ಕೃಷಿ ಪ್ರಧಾನ ಜಿಲ್ಲೆಯಾದ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯವನ್ನು ಸರ್ಕಾರ ನೀಡಿದೆ ಹಾಗೂ ಆದಿಚುಂಚನಗಿರಿಯಲ್ಲಿ ಖಾಸಗಿ ಕೃಷಿ ಕಾಲೇಜು ಪ್ರರಂಭಿಸಲು ಅನುಮತಿ ನೀಡಲಾಗಿದೆ ಎಂದರು.
ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿ ಈ ದಿನ ರಾಜ್ಯದ ಇತಿಹಾಸದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ದಿನವಾಗಿದೆ. ಇದೇ ಮೊದಲ ಬಾರಿಗೆ ಜೂನ್ ಮಾಹೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ್ದಾರೆ ಎಂದರು.
ಈ ಬಾರಿ ಮೆಟ್ಟೂರು ಅಣೆಕಟ್ಟು ಸಹ ಭರ್ತಿಯಾಗುವುದರಿಂದ ಬಹಳಷ್ಟು ಸಮಸ್ಯೆಗಳು ಪರಿಹಾರವಾಗಿದೆ. ರಾಜ್ಯದ ಅಣೆಕಟ್ಟುಗಳು ಸಹ ಭರ್ತಿಯಾಗಿ ರಾಜ್ಯದ ಜನರು ಹಾಗೂ ರೈತರಲ್ಲಿ ಮಂದಹಾಸ ಮೂಡಿಸಿದೆ ಎಂದರು.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ಕೆಲಸಗಳ ಅಭಿವೃದ್ಧಿಗಾಗಿ 150 ಕೋಟಿ ರೂ ಮಂಜೂರಾತಿ ನೀಡಲಾಗಿದೆ. ಆರ್ಥಿಕ ಇಲಾಖೆಯಲ್ಲೂ ಮಂಜೂರಾತಿ ಕೊಡಿಸಿಕೊಡಬೇಕಾಗಿ ಕೋರಿದರು.
ಜಿಲ್ಲೆಯಲ್ಲಿ ಸಿ.ಡಿ.ಎಸ್, ರಾಮಸ್ವಾಮಿ ಹಾಗೂ ಇತರೆ ನಾಲೆಗಳನ್ನು ಈಗಾಗಲೇ ಅಭಿವೃದ್ಧಿ ಪಡಿಸಲಾಗಿದೆ. ಇದಕ್ಕೆ ಹೊಂದಿಕೊಂಡಿರುವ ಉಪನಾಲೆಗಳನ್ನು ಅಭಿವೃದ್ಧಿ ಪಡಿಸಿಕೊಡಬೇಕಾಗಿ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಡಾ:ಹೆಚ್.ಸಿ ಮಹದೇವಪ್ಪ, ರೇಷ್ಮೆ ಸಚಿವ ಕೆ.ವೆಂಕಟೇಶ್, ಸಣ್ಣ ನೀರವಾರಿ ಸಚಿವ ಬೋಸ್ ರಾಜ್, ವಿಧಾನಸಭಾ ಶಾಸಕರಾದ ತನ್ವೀರ್ ಸೇಠ್, ಪುಟ್ಟರಂಗ ಶೆಟ್ಟಿ, ಉದಯ್ ಕೆ.ಎಂ, ಪಿ.ರವಿಕುಮಾರ್, ಹರೀಶ್ ಗೌಡ, ಎ.ಆರ್.ಕೃಷ್ಣ ಮೂರ್ತಿ, ವಿಧಾನ ಪರಿಷತ್ ಶಾಸಕರಾದ ಮಧು.ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಾ: ತಿಮ್ಮಯ್ಯ,, ವಿವೇಕನಂದ, ಸಂಸದರಾದ ಸುನೀಲ್ ಬೋಸ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಉಪಸ್ಥಿತರಿದ್ದರು.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…
ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…