ನಾಗಮಂಗಲ: ಮುಂದಿನ ಯುವ ಪೀಳಿಗೆಗೆ ಸತ್ವವಾದ ಮಣ್ಣು, ಯೋಗ್ಯ ನೀರು ಒದಗಿಸುವ ಜವಬ್ದಾರಿ ನಮ್ಮಗಳ ಮೇಲಿದೆ ಎಂದು ಮಣ್ಣು ವಿಜ್ಞಾನಿ ಡಾ.ಹತಿಫ ಹೇಳಿದರು.
ಕೃಷಿ ಇಲಾಖೆಯ ಸಹಯೋಗದಲ್ಲಿ ದೇವಲಾಪುರ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆ ಅಡಿ ಜಲಾನಯನ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರೈತರು ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕ. ಮಣ್ಣಿನ ಸವಕಳಿ ತಪ್ಪಿಸಲು ಬದುಗಳನ್ನು ನಿರ್ಮಿಸಿಕೊಳ್ಳಬೇಕು. ಡಬ್ಲ್ಯೂಡಿಸಿ ಟು ಯೋಜನೆ ಹಾಗೂ ಕೃಷಿ ಇಲಾಖೆಯ ಯೋಜನೆ ಅಡಿ ರೈತರು ಕೃಷಿ ಹೊಂಡ ನಿರ್ಮಿಸಿಕೊಳ್ಳಬಹುದು ಎಂದು ತಿಳಿಸಿದರು.
ಈ ಅಭಿಯಾನದಡಿ ಜಲಾನಯನ ಸಂರಕ್ಷಣೆ ಮಣ್ಣಿನ ಆರೋಗ್ಯ ವರ್ಧನೆ ಮತ್ತು ಮಳೆ ನೀರು ಸಂಗ್ರಹ ಸಂಬಂಧ ಆತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಗುತ್ತದೆ.
ಸುಸ್ಥಿರ ನೀರು ನಿರ್ವಹಣೆ ಮಹತ್ವದ ಹೆಜ್ಜೆಯಾಗಿ ಪ್ರಧಾನ ಮಂತ್ರಿ ಕೃಷಿ ಸಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕದಲ್ಲಿ ರಾಷ್ಟ್ರ ಮಟ್ಟದಿಂದ ಜಾಗೃತಿ ಅಭಿಯಾನ ಜಲಾನಯನ ಯಾತ್ರೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ.
ಸಭೆಯಲ್ಲಿ ಭೂಮಿ ಮತ್ತು ನೀರನ್ನು ಸಂರಕ್ಷಿಸುವ ಪ್ರತಿಜ್ಞಾ ಬೋಧನೆಯನ್ನು ಮಾಡಲಾಯಿತು. ಈ ಯಾತ್ರೆಯ ಅಂಗವಾಗಿ ರೈತ ಮಹಿಳೆಯರಿಗೂ ವಿವಿಧ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿದ್ದು ವಿಜೇತರಿಗೆ ಬಹುಮಾನ ವಿತರಣೆ ಮಾಡುವುದರ ಜೊತೆಗೆ ಮಾರ್ಗದರ್ಶಕರನ್ನು ಅಭಿನಂದಿಸಲಾಯಿತು.
ಸಮಾರಂಭದಲ್ಲಿ ಮಂಡ್ಯ ಜಿಲ್ಲಾ ಕೃಷಿ ಜಂಟಿ ನಿರ್ದೇಶಕರಾದ ಅಶೋಕ್, ಪಾಂಡವಪುರ ಉಪ ಕೃಷಿ ನಿರ್ದೇಶಕರಾದ ಭಾನುಪ್ರಕಾಶ್, ದೇವಲಾಪುರ ರೈತ ಉತ್ಪಾದಕರ ಸಂಘದ ಅಧ್ಯಕ್ಷ ಎನ್.ಜೆ.ರಾಜೇಶ್, ತಟ್ಟಹಳ್ಳಿ ನರಸಿಂಹಮೂರ್ತಿ, ಗ್ರಾ.ಪಂ. ಅಧ್ಯಕ್ಷರಾದ ಬೋರಯ್ಯ, ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕ ನಾಗೇಗೌಡ ಮತ್ತು ಕೃಷಿ ಇಲಾಖೆಯ ನೌಕರವರ್ಗ ಉಪಸ್ಥಿತರಿದ್ದರು. ನಾಗಮಂಗಲ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಹರೀಶ್ ಸ್ವಾಗತಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…