ಮಂಡ್ಯ

ಅಂಬೇಡ್ಕರ್ ಅವರ ತತ್ವ, ಆದರ್ಶ ಅಳವಡಿಸಿಕೊಳ್ಳುವುದು ಅತ್ಯಗತ್ಯ: ಡಾ. ಕುಮಾರ

ಮಂಡ್ಯ: ಭಾರತ ದೇಶದಲ್ಲಿ ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿ. ಸಮಾಜದಲ್ಲಿ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸಮಾನತೆ ದೊರಕಬೇಕು ಎಂದು ಶ್ರಮಿಸಿದವರು. ಅವರ ತತ್ವ, ಚಿಂತನೆ, ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದ ಉದ್ಯಾನವನದಲ್ಲಿ ನಡೆದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 133 ನೇ ಜನ್ಮ ದಿನಾಚರಣೆಯ ಅಂಗವಾಗಿ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರು ಜನ್ಮ ತಾಳಿದ್ದು, ನಮ್ಮೆಲ್ಲರ ಪುಣ್ಯ, ಅವರು ನೀಡಿದ ಸಂವಿಧಾನವನ್ನು ಭಾರತೀಯರಾದ ನಾವೆಲ್ಲರೂ ಅಳವಡಿಸಿಕೊಂಡಿರುವುದು ಪುಣ್ಯದ ವಿಷಯ. ಭಾರತ ಅಸಮಾನತೆಗಳ ತವರೂರಾಗಿದ್ದ ಸಮಯದಲ್ಲಿ, ಅಸಮಾನತೆಯನ್ನು ಹೋಗಲಾಡಿಸುವಲ್ಲಿ ಅವರಿಗಾದ ಅಪಮಾನಗಳನ್ನು ಮೆಟ್ಟಿನಿಂತು, ಅಸಾಮಾನ್ಯ ಸಾಧನೆಯನ್ನು ಮಾಡಿದ್ದಾರೆ. ಅವರು ಕೇವಲ ವ್ಯಕ್ತಿಯಲ್ಲ, ದೊಡ್ಡ ಶಕ್ತಿ ಎಂದು ಹೇಳಿದರು.

ಸುಮಾರು 50,000 ಕ್ಕೂ ಹೆಚ್ಚು ಪುಸ್ತಕಗಳು ಅಂಬೇಡ್ಕರ್ ಅವರ ಮನೆಯಲ್ಲಿತ್ತು, ಅವರ ಮನೆಯನ್ನು ದೊಡ್ಡ ಖಾಸಗಿ ಗ್ರಂಥಾಲಯ ಎನ್ನಬಹುದು‌. ನಿಜವಾದ ಜ್ಞಾನದಾಹ ಉಳ್ಳವರು ಎಲ್ಲವನ್ನು ಗೆಲ್ಲುತ್ತಾರೆ ಎಂಬುದಕ್ಕೆ ಡಾ: ಬಿ.ಆರ್.ಅಂಬೇಡ್ಕರ್ ಅವರು ಸಾಕ್ಷಿಯಾಗಿದ್ದಾರೆ. ಸರ್ವ ಧರ್ಮಗಳನ್ನು ಸಮಾನತೆಯಿಂದ ಕಾಣಬೇಕು ಎಂದು ಹೇಳಿದ ದಾರ್ಶನಿಕ ಅಂಬೇಡ್ಕರ್ ಅವರಾಗಿದ್ದಾರೆ.

ಜಿಲ್ಲಾ ಪಂಚಾಯತ್‌ನ ಸಿಇಒ ಶೇಕ್ ತನ್ವೀರ್ ಆಸಿಫ್ ಮಾತನಾಡಿ, ಅಂಬೇಡ್ಕರ್ ರವರು ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಭಾಷೆಯ ರಚನೆ, ರಾಜ್ಯಗಳ ವಿಭಜನೆ, ಮಹಿಳೆಯರ ಸಮಸ್ಯೆ, ರಾಜ್ಯ ಮತ್ತು ಅಲ್ಪಸಂಖ್ಯಾತರ ಸಮಸ್ಯೆ, ಅಸ್ಪೃಶ್ಯತೆ, ಜಾತಿ ಪದ್ಧತಿಯನ್ನು ಹೋಗಲಾಡಿಸುವ ಬಗ್ಗೆ ಇನ್ನೂ ಅನೇಕ ಪುಸ್ತಕವನ್ನು ರಚಿಸುವ ಮೂಲಕ ದೇಶದಲ್ಲಿದ್ದ ಸಮಸ್ಯೆಗಳ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಹೆಚ್ ಎಲ್‌ ನಾಗರಾಜು, ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮೋಹನ್, ನಗರ ಸಭೆ ಆಯುಕ್ತ ಆರ್ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago