ಮಂಡ್ಯ : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ.
ಆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರ ‘ಗಿಣಿ ಶಾಸ್ತ್ರ ಕೇಳಿ’ ಹೇಳಿಕೆಗೆ ಟಕ್ಕರ್ ನೀಡಿದ್ದಾರೆ.
ಮುಖ್ಯಮಂತ್ರಿ ವಿಚಾರಕ್ಕೆ ಬಿಜೆಪಿಯವರು ಗಿಣಿ ಶಾಸ್ತ್ರ ಕೇಳಿ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದರು. ಡಿಕೆಶಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು ಗಿಣಿ ಶಾಸ್ತ್ರ ಕೇಳಿ ಡಿಸಿಎಂಗೆ ತಿರುಗೇಟು ನೀಡಿದ್ದಾರೆ.
ಇದನ್ನು ಓದಿ: ಸಿದ್ದರಾಮಯ್ಯ, ಡಿಕೆಶಿ ಸಿಎಂ ಫೈಟ್ : ರೇಸ್‌ಗೆ ಮತ್ತೊಬ್ಬರ ಎಂಟ್ರಿ…!
ಮಂಡ್ಯದ ನಗರಸಭೆ ಎದುರು ಗಿಳಿ ಶಾಸ್ತ್ರ ಕೇಳಲಾಯಿತು. ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ, ಇಲ್ವಾ ಎಂದು ಬಿಜೆಪಿಗರು ಶಾಸ್ತ್ರ ಕೇಳಿದರು. ಈ ವೇಳೆ ಚೊಂಬು ಇರುವ ಕಾರ್ಡ್‌ನ್ನು ಗಿಣಿ ತೆಗೆದಿದೆ. ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲ್ಲ. ಅವರ ಕೈಗೆ ಚೊಂಬು ಎಂದು ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.
ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಶಾಸ್ತ್ರ ಕೇಳಿದಾಗ, ಈ ವೇಳೆ ಹೂ ಇರುವ ಕಾರ್ಡ್ ತೆಗೆದಿದೆ ಗಿಣಿ. ಸಿದ್ದರಾಮಯ್ಯ ಸಿಎಂ ಆಗಿದ್ರೆ ಜನರ ಕಿವಿಗೆ ಹೂ ಎಂದು ಬಿಜೆಪಿ ಕಾರ್ಯಕರ್ತರು ವಿಡಂಬನೆ ಮಾಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…