Mysore
30
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಮಂಡ್ಯ: ಮಹಿಳೆ ಆತ್ಮಹತ್ಯೆ; ವರದಕ್ಷಿಣೆ ಕಿರುಕುಳ ದೂರು ದಾಖಲು

ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿಯ ಲಿಂಗಾಪುರದಲ್ಲಿ ಬುಧವಾರ ( ಮಾರ್ಚ್‌ 20 ) ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ. ಗ್ರಾಮದ ರಾಜೇಂದ್ರ ಹಾಗೂ ಮಂಜುಳ ದಂಪತಿಯ ತೃತೀಯ ಪುತ್ರಿ ಪ್ರೇಮಕುಮಾರಿ ( 26 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮೃತಳ ತಾಯಿ ಮಂಜುಳಾ ಕಿಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೈಸೂರಿನ ಎನ್‌ಆರ್‌ ಮೊಹಲ್ಲಾದ ಕುಮಾರಸ್ವಾಮಿ ಎಂಬುವವರ ಪುತ್ರ ರಾಘವೇಂದ್ರ ಎಂಬಾತನಿಗೆ ಎರಡು ವರ್ಷಗಳ ಹಿಂದೆ ತಮ್ಮ ಮಗಳನ್ನು ಮದುವೆ ಮಾಡಿಕೊಡಲಾಗಿತ್ತು. ವಿವಾಹದ ವೇಳೆ 150 ಗ್ರಾಂ ಚಿನ್ನ ಹಾಗೂ 5 ಲಕ್ಷ ರೂಪಾಯಿಗಳನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಆರಂಭದಲ್ಲಿ ಚೆನ್ನಾಗಿದ್ದರು. ಆದರೆ ತದನಂತರ ತವರಿನಿಂದ ಮತ್ತಷ್ಟು ಹಣ ತರಲು ಕಿರುಕುಳ ನೀಡಲಾರಂಭಿಸಿದ್ದರು. ಈ ಸಂಬಂಧ ಸಾಕಷ್ಟು ರಾಜಿ, ಪಂಚಾಯಿತಿ ನಡೆದಿದ್ದರೂ ಪ್ರಯೋಜನವಾಗಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821

Tags: