ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿಯ ಲಿಂಗಾಪುರದಲ್ಲಿ ಬುಧವಾರ ( ಮಾರ್ಚ್ 20 ) ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ. ಗ್ರಾಮದ ರಾಜೇಂದ್ರ ಹಾಗೂ ಮಂಜುಳ ದಂಪತಿಯ ತೃತೀಯ ಪುತ್ರಿ ಪ್ರೇಮಕುಮಾರಿ ( 26 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮೃತಳ ತಾಯಿ ಮಂಜುಳಾ ಕಿಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೈಸೂರಿನ ಎನ್‌ಆರ್ ಮೊಹಲ್ಲಾದ ಕುಮಾರಸ್ವಾಮಿ ಎಂಬುವವರ ಪುತ್ರ ರಾಘವೇಂದ್ರ ಎಂಬಾತನಿಗೆ ಎರಡು ವರ್ಷಗಳ ಹಿಂದೆ ತಮ್ಮ ಮಗಳನ್ನು ಮದುವೆ ಮಾಡಿಕೊಡಲಾಗಿತ್ತು. ವಿವಾಹದ ವೇಳೆ 150 ಗ್ರಾಂ ಚಿನ್ನ ಹಾಗೂ 5 ಲಕ್ಷ ರೂಪಾಯಿಗಳನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಆರಂಭದಲ್ಲಿ ಚೆನ್ನಾಗಿದ್ದರು. ಆದರೆ ತದನಂತರ ತವರಿನಿಂದ ಮತ್ತಷ್ಟು ಹಣ ತರಲು ಕಿರುಕುಳ ನೀಡಲಾರಂಭಿಸಿದ್ದರು. ಈ ಸಂಬಂಧ ಸಾಕಷ್ಟು ರಾಜಿ, ಪಂಚಾಯಿತಿ ನಡೆದಿದ್ದರೂ ಪ್ರಯೋಜನವಾಗಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…