ಮಂಡ್ಯ: ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್‌ನವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ತಾಲ್ಲೂಕಿನ ಹೊಳಲು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಹಗ್ಗ ಮತ್ತು ಸೀರೆಗಳನ್ನು ಪಂಚಾಯಿತಿ ಎದುರಿನ ಶೆಲ್ಟರ್‌ನಲ್ಲಿ ನೇತು ಹಾಕಿ, ‘ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ’. ‘ಯಾವ ಅಧಿಕಾರಿಗೆ ಮನವಿ ಕೊಡಬೇಕೆಂದು ಗೊತ್ತಿಲ್ಲದೆ, ಪಂಚಾಯಿತಿಗೆ ಬಂದಿದ್ದೇವೆ’ ಎಂದು ಲತಾ, ದಿವ್ಯಾ, ರೇಣುಕಾ, ಸೌಮ್ಯಾ, ರುಕ್ಮಿಣಿ ಅಳಲು ತೋಡಿಕೊಂಡರು.
‘ಮೈಕ್ರೋ ಫೈನಾನ್ಸ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಖಾಸಗಿ ಬ್ಯಾಂಕ್‌ನವರು ಕೂಲಿ ಮಾಡುತ್ತಿರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಲಕ್ಷಗಟ್ಟಲೆ ಸಾಲ ನೀಡಿದ್ದು, ಮರುಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ. ಸಾಲ ಪಡೆದಿರುವುದು ನಿಜ. ಆದರೆ, ಮರುಪಾವತಿ ಮಾಡಲು ಕಾಲಾವಕಾಶ ನೀಡಬೇಕು’ ಎಂದು ಕನ್ನಡಸೇನೆ ಸಂಘಟನೆಯ ಜಿಲ್ಲಾ ಸಂಚಾಲಕ ವೇಣುಗೋಪಾಲ್ ಒತ್ತಾಯಿಸಿದರು.
ಕಂತಿನ ಪ್ರಕಾರ ಸಾಲ ಮರುಪಾವತಿ ಮಾಡಲು ತಪ್ಪಿದರೆ, ಒಂದು ವಾರ, ೧೫ ದಿವಸ ಅಥವಾ ಒಂದು ತಿಂಗಳ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲು ಮಾಡಲು ನಿಲ್ಲುತ್ತಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಭಯ ಹುಟ್ಟಿಸುತ್ತಾರೆ, ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಂಚಾಯಿತಿ ಉಪಾಧ್ಯಕ್ಷ ನಾರಾಯಣಪ್ಪ, ಸದಸ್ಯರಾದ ರಾಜಶೇಖರ್, ಎಚ್.ಡಿ.ಪಲ್ಲವಿ ಹಾಗೂ ಪಿಡಿಒ ಸಂತೋಷ್, ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಮಹಿಳೆಯರು ಪ್ರತಿಭಟನೆ ಹಿಂಪಡೆದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…