ಮಂಡ್ಯ

ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್‌ನಿಂದ ಕಿರುಕುಳ ಆರೋಪ; ಮಹಿಳೆಯರ ಪ್ರತಿಭಟನೆ

ಮಂಡ್ಯ: ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್‌ನವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ತಾಲ್ಲೂಕಿನ ಹೊಳಲು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಹಗ್ಗ ಮತ್ತು ಸೀರೆಗಳನ್ನು ಪಂಚಾಯಿತಿ ಎದುರಿನ ಶೆಲ್ಟರ್‌ನಲ್ಲಿ ನೇತು ಹಾಕಿ, ‘ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ’. ‘ಯಾವ ಅಧಿಕಾರಿಗೆ ಮನವಿ ಕೊಡಬೇಕೆಂದು ಗೊತ್ತಿಲ್ಲದೆ, ಪಂಚಾಯಿತಿಗೆ ಬಂದಿದ್ದೇವೆ’ ಎಂದು ಲತಾ, ದಿವ್ಯಾ, ರೇಣುಕಾ, ಸೌಮ್ಯಾ, ರುಕ್ಮಿಣಿ ಅಳಲು ತೋಡಿಕೊಂಡರು.

‘ಮೈಕ್ರೋ ಫೈನಾನ್ಸ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಖಾಸಗಿ ಬ್ಯಾಂಕ್‌ನವರು ಕೂಲಿ ಮಾಡುತ್ತಿರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಲಕ್ಷಗಟ್ಟಲೆ ಸಾಲ ನೀಡಿದ್ದು, ಮರುಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ. ಸಾಲ ಪಡೆದಿರುವುದು ನಿಜ. ಆದರೆ, ಮರುಪಾವತಿ ಮಾಡಲು ಕಾಲಾವಕಾಶ ನೀಡಬೇಕು’ ಎಂದು ಕನ್ನಡಸೇನೆ ಸಂಘಟನೆಯ ಜಿಲ್ಲಾ ಸಂಚಾಲಕ ವೇಣುಗೋಪಾಲ್ ಒತ್ತಾಯಿಸಿದರು.

ಕಂತಿನ ಪ್ರಕಾರ ಸಾಲ ಮರುಪಾವತಿ ಮಾಡಲು ತಪ್ಪಿದರೆ, ಒಂದು ವಾರ, ೧೫ ದಿವಸ ಅಥವಾ ಒಂದು ತಿಂಗಳ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲು ಮಾಡಲು ನಿಲ್ಲುತ್ತಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಭಯ ಹುಟ್ಟಿಸುತ್ತಾರೆ, ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಂಚಾಯಿತಿ ಉಪಾಧ್ಯಕ್ಷ ನಾರಾಯಣಪ್ಪ, ಸದಸ್ಯರಾದ ರಾಜಶೇಖರ್, ಎಚ್.ಡಿ.ಪಲ್ಲವಿ ಹಾಗೂ ಪಿಡಿಒ ಸಂತೋಷ್, ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಮಹಿಳೆಯರು ಪ್ರತಿಭಟನೆ ಹಿಂಪಡೆದರು.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಹಾಸನಾಂಬೆ ದೇವಾಲಯದ ಗರ್ಭಗುಡಿ ಓಪನ್:‌ ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ತಾಯಿ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಹಾಸನದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ…

39 mins ago

ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ, 6 ಸಾವು!

ಬೆಂಗಳೂರು: ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲೂ…

3 hours ago

ರೈಲು ಪ್ರಯಾಣಿಕರೇ ಗಮನಿಸಿ: ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್‌ ಚಾರ್ಜಿಂಗ್‌ ಬಂದ್‌!

ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ! ರಾತ್ರಿ ಪ್ರಯಾಣದ ವೇಳೆ ಮೊಬೈಲ್‌ ಚಾರ್ಜ್‌ ಮಾಡಿಕೊಳ್ಳುವ ಯೋಚನೆಯಿದ್ದರೆ ಈ ಮಾಹಿತಿ ತಿಳಿದುಕೊಳ್ಳಿ. ರಾತ್ರಿ…

3 hours ago

ಓದುಗರ ಪತ್ರ: ಕಿಡಿಗೇಡಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್ ಮತ್ತು ಇತರೆ ಕ್ರಾಸ್ ರಸ್ತೆಗಳಲ್ಲಿ ಮನೆಗಳ ಮುಂದೆ ಕಾರುಗಳನ್ನು ನಿಲ್ಲಿಸುತ್ತಿದ್ದು, ಕಳೆದ…

5 hours ago

ಓದುಗರ ಪತ್ರ: ಖರ್ಗೆಯವರ ಮಾತುಗಳು ಖಂಡನೀಯ

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಂದೆಯನ್ನು ಕುರಿತಂತೆ ಅವಹೇಳನಾಕಾರಿ…

5 hours ago

ಓದುಗರ ಪತ್ರ: ಶಾಲಾ ಶಿಕ್ಷಕರನ್ನು ಬೋಧಕೇತರ ಕಾರ್ಯಗಳಿಗೆ ನಿಯೋಜಿಸದಿರಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ದಿಢೀರ್ ಬದಲಾವಣೆಯಿಂದ ಶಾಲಾ…

5 hours ago