ಮಂಡ್ಯ

ಪುರುಷರ ಆಲೋಚನೆ ಬದಲಾದರೆ ಮಹಿಳೆ ಸದೃಢಲಾಗುತ್ತಾಳೆ: ಡಾ.ಹೆಚ್‌.ಸಿ ಹೇಮಲತಾ

ಶ್ರೀರಂಗಪಟ್ಟಣ: ಸಮಾಜದಲ್ಲಿ ಮಹಿಳೆಯರು ನಾಲ್ಕು ಗೋಡೆಯಲ್ಲಿ ಬದುಕಬೇಕು ಎಂಬ ಪುರುಷರ ಆಲೋಚನೆ ಬದಲಾದರೆ ಮಹಿಳೆಯರು ಇನ್ನೂ ಹೆಚ್ಚು ಸದೃಢರಾಗುತ್ತಾರೆ ಎಂದು ಮಹಿಳಾ ಸರ್ಕಾರಿ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥೆ ಹೇಮಲತಾ‌.ಎಚ್.ಸಿ ರವರು ಅಭಿಪ್ರಾಯಪಟ್ಟರು.

ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಏರ್ಪಡಿಸಿದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ದೇಶ ಪ್ರಗತಿ ಆಗಬೇಕಾದರೆ ಪುರುಷ ಮತ್ತು ಮಹಿಳೆ ಇಬ್ಬರ ಕಾಣಿಕೆ ಬಹಳ ಮುಖ್ಯ. ಆದರೆ, ಭಾರತವು ಪುರುಷ ಪ್ರಧಾನವಾದ ದೇಶವಾಗಿದ್ದು ಇನ್ನೂ ಕೆಲವು ಕಡೆ ಮಹಿಳೆ ಅಬಲೆಯಾಗಿದ್ದಾಳೆ ಎಂದು ಆತಂಕ ವ್ಯಕ್ತಪಡಿಸಿದರು.

ಒಂದು ದೇಶದ ಆರ್ಥಿಕ ಪ್ರಗತಿಯ ಸಾಧನೆಯಾಗಿ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾಳೆ. ಇಂದಿರಾಗಾಂಧಿ, ಕಲ್ಪನಾ ಚಾವ್ಲಾ, ಕಿರಣ್ ಮುಜುಂದಾರ್, ಸಾಲುಮರದ ತಿಮ್ಮಕ್ಕ ಇನ್ನೂ ಹಲವಾರು ಮಹಿಳೆಯರು ಬಾಹ್ಯಾಕಾಶದಿಂದ ಹಿಡಿದು ಆಟೋ ಚಾಲನೆ ಮಾಡುವವರೆಗೂ ತಮ್ಮ ನೈಪುಣ್ಯತೆ, ಧೈರ್ಯ, ಸವಾಲುಗಳ ಮೂಲಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಕುಟುಂಬದಲ್ಲಿ ತಾಯಿಯಾಗಿ, ಹೆಂಡತಿಯಾಗಿ, ಸಹೋದರರಿಯಾಗಿ, ಮಗಳಾಗಿ, ಎಲ್ಲ ಮುಜಲುಗಳಲ್ಲಿ ಅವಳ ಕಾಣಿಕೆ ದೊಡ್ಡದು ಎಂದು ತಿಳಿಸಿದರು.

ಸಮಾಜದಲ್ಲಿ ಮಹಿಳೆಗೆ ಸಮಾನ ಅವಕಾಶ, ಸಮಾನತೆ, ಗೌರವ ದೊರೆತರೆ ಆ ದೇಶ ಸಮೃದ್ಧಿಯ ನಾಡಾಗುತ್ತದೆ ಇಲ್ಲವಾದರೆ ಅಸಮಾನತೆಯ ಗೂಡಾಗುತ್ತದೆ ಎಂದು ಹೇಳಿದರು.

ನಂತರ ಕಾಲೇಜಿನ ಪ್ರಾಂಶುಪಾಲರಾದ ಡಾ.ಗುರುರಾಜ ಪ್ರಭು.ಕೆ ಮಾತನಾಡಿ, ಸಮಾಜ ಕಟ್ಟುವಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯವಾದದ್ದು. ಆದರೆ, ಅವರಿಗೆ ಒಳ್ಳೆಯ ಅವಕಾಶ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಸಂವಿಧಾನದ ಹಕ್ಕು ಮತ್ತು ಅವಕಾಶ ಬಳಸಿಕೊಳ್ಳುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಕುಸುಮದೇವಿ, ಸಸ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸೈಯದ್ ಕೌಸರ್, ಪ್ರಾಧ್ಯಾಪಕರಾದ ಡಾ. ಜಯಲಕ್ಷ್ಮಿ, ಡಾ.ಪುಷ್ಪಲತಾ, ಪ್ರಾಣಿ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಗಿರಿಜಾಂಬರವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

4 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

4 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

4 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

6 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

6 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

6 hours ago