ಮಂಡ್ಯ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ ಪದವಿ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ದಾಖಲೆ ಸಮಯದಲ್ಲೇ ಮುಗಿಸಿ ಕೊನೆಯ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದು, ಸರ್ಕಾರಿ ಸಂಸ್ಥೆಯೊಂದು ಇಷ್ಟೊಂದು ವೇಗವಾಗಿ ಫಲಿತಾಂಶ ನೀಡಿರುವುದು ಕಾಲೇಜಿನ ಪರಿಶ್ರಮದ ಹೆಗ್ಗುರುತಾಗಿದೆ.

ಕಾಲೇಜಿನ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ, ಬಿಸಿಎ, ಬಿಎಫ್‌ಎಸ್‌ಐ, ಇ-ಕಾಮರ್ಸ್ ಪದವಿ ಪರೀಕ್ಷೆಗಳು ಕಳೆದ ಜ.2ರಿಂದ ಜ.31ರವರೆಗೆ ನಡೆದಿದ್ದವು. ಪರೀಕ್ಷೆಗಳು ಜ.31ರಂದು ಮುಕ್ತಾಯಗೊಂಡಿದ್ದು, ಅದೇ ದಿನ ಸಂಜೆ 4ಕ್ಕೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಯಿತು. ವಿಶೇಷವೆಂದರೆ ಮೌಲ್ಯಮಾಪನ ಮುಗಿದ ಕೇವಲ ಒಂದೇ ಗಂಟೆಯಲ್ಲಿ (ಜ.31ರ ಸಂಜೆ 5 ಗಂಟೆ) ಕಾಲೇಜಿನ ಪ್ರಾಂಶುಪಾಲ ಪ್ರೊ.ಗುರುರಾಜ ಕೆ.ಪ್ರಭು ಅವರು ಫಲಿತಾಂಶವನ್ನು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಶಿಸ್ತುಬದ್ಧ ಕೆಲಸ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದಾಗಿ ಈ ಸಾಧನೆಯು ನಮ್ಮ ಸರ್ಕಾರಿ ಪದವಿ ಕಾಲೇಜಿನಿಂದ ಸಾಧ್ಯವಾಗಿದೆ. ಈ ಕಾರ್ಯವನ್ನು ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ರವಿಕಾಂತ್ ಲಂಬಾಣಿ ಅವರು ಮತ್ತು ತಂಡ ಪರೀಕ್ಷೆ ಆರಂಭದಿಂದ ಮುಕ್ತಾಯದವರೆಗೂ ಸತತ ಪರಿಶ್ರಮ, ತಾಳ್ಮೆ, ಜಾಣ್ಮೆ, ಅತ್ಯಂತ ಶಿಸ್ತಿನಿಂದ ಶ್ರಮಿಸಿದ ಫಲವಾಗಿ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಲು ಸಹಕಾರಿಯಾಯಿತು ಎಂದರು.

ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ರವಿಕಾಂತ್ ಲಮಾಣಿ, ಮೌಲ್ಯಮಾಪನ ಸಂಯೋಜಕ ಎಂ.ಮಾದೇಗೌಡ, ಪರೀಕ್ಷಾ ಸಮಿತಿಯ ಸಂಚಾಲಕ ಡಾ. ವಿ.ಶಿವಕೀರ್ತಿ, ಸಹ ಸಂಚಾಲಕ ಡಾ. ಎಸ್.ಶಿವರಾಮು, ಪರೀಕ್ಷಾಂಗ ವಿಭಾಗದ ಸಿಬ್ಬಂದಿಗಳಾದ ಸಾಗರ್, ನವ್ಯಶ್ರೀ, ಪವಿತ್ರ, ಸಿಂಧುಶ್ರೀ ಅವರನ್ನು ಶ್ಲಾಘಿಸಿದ ಪ್ರಾಂಶುಪಾಲರು, ಈ ರೀತಿಯ ಫಲಿತಾಂಶ ಪ್ರಕಟಣೆ ವಿದ್ಯಾರ್ಥಿಗಳು, ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಮುನ್ನುಡಿಯಾಗಲಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಕಾರ್ಯವನ್ನು ಯಶಸ್ವಿಯಾಗಿ ಮುಂದುವರಿಸುತ್ತೇವೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಸುಗಮ ಓದಿಗೆ ಈ ಫಲಿತಾಂಶ ಸಕಾರಾತ್ಮಕ ಪರಿಣಾಮ ಉಂಟುಮಾಡುತ್ತ ಎಂದು ಸಂತಸ ವ್ಯಕ್ತಪಡಿಸಿದರು.

ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ರವಿಕಾಂತ್ ಲಮಾಣಿ ಮಾತನಾಡಿ, ಈ ರೀತಿ ಮೌಲ್ಯಮಾಪನ ಮುಗಿದ ದಿನವೇ ಫಲಿತಾಂಶ ನೀಡಲು ಶ್ರಮಿಸಿದ ಪರೀಕ್ಷಾ ಸಮಿತಿಯ ಸಂಚಾಲಕರು, ಸದಸ್ಯರು, ಪರೀಕ್ಷಾಂಗ ವಿಭಾಗದ ಸಿಬ್ಬಂದಿ, ಮಂಡ್ಯ ಜಿಲ್ಲೆ ಹಾಗೂ ಮೈಸೂರು ಜಿಲ್ಲೆಯ ವಿವಿಧ ವಿಷಯಗಳ ಮೌಲ್ಯಮಾಪಕರು ಮತ್ತು ಕಾಲೇಜಿನ ಎಲ್ಲಾ ವಿಭಾಗಗಳ ಪರೀಕ್ಷಾ ಮಂಡಳಿ ಅಧ್ಯಕ್ಷರು ಮತ್ತು ಬೋಧಕರಿಗೆ ಅಭಿನಂದನೆ ಸಲ್ಲಿಸಿದರು.

ಮೌಲ್ಯಮಾಪನ ಸಂಯೋಜಕ ಎಂ.ಮಾದೇಗೌಡ, ಪರೀಕ್ಷಾ ಸಮಿತಿಯ ಸಂಚಾಲಕ ಡಾ.ವಿ.ಶಿವಕೀರ್ತಿ, ಸಹ ಸಂಚಾಲಕ ಡಾ.ಎಸ್.ಶಿವರಾಮು, ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಕೆ.ಪಿ.ರವಿಕಿರಣ್, ಎಸ್.ಪಿ.ಹೇಮಲತಾ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

2 mins ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

27 mins ago

ಕಾಡಾನೆ ದಾಳಿಗೆ ನಾಶವಾದ ತೆಂಗು, ಮುಸುಕಿನ ಜೋಳ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…

35 mins ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

2 hours ago

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

3 hours ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

4 hours ago