ಮಂಡ್ಯ

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ ಕೆರೆ ಕಟ್ಟೆಗಳಿಗೆ ನೀರಿಲ್ಲ, ಇಂತಹ ಘೋಷಣೆಗಳೊಂದಿಗೆ ವಳಗೆರೆಹಳ್ಳಿ ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಳೆರಾಯನ ಮತ್ತು ಗಂಗಾಮಾತೆಯ ಮಣ್ಣಿನ ಪ್ರತಿಮೆ ಮಾಡಿ ವಿಶೇಷವಾದ ಅಲಂಕಾರಗಳೊಂದಿಗೆ ಎರಡು ದೇವತೆಗಳನ್ನು ತಲೆಯ ಮೇಲೆ ಹೊತ್ತು ಗ್ರಾಮದ ಪ್ರತಿ ಬೀದಿಗಳಲ್ಲಿ ಮನೆ ಮನೆಗೂ ತೆರಳಿದರು. ಮಳೆರಾಯ ಮತ್ತು ಗಂಗಾಮಾತೆಯನ್ನು ಹೊತ್ತಿರುವ ವ್ಯಕ್ತಿಗಳಿಗೆ ಮಾತೆಯರು ಬಿಂದಿಗೆಗಳಿಂದ ನೀರು ಹೂಯ್ದು, ಅರಿಶಿಣ, ಕುಂಕುಮವಿಟ್ಟು, ತೆಂಗಿನ ಕಾಯಿಗಳಿಂದ ಈಡುಗಾಯಿ ಒಡೆದು, ಹೂವು ಹಣ್ಣು ಗಂಧದಕಡ್ಡಿ ಕರ್ಪೂರಗಳಿಂದ ಪೂಜೆ ಸಲ್ಲಿಸಿ, ಮನ ತುಂಬಿ ಪ್ರಾರ್ಥಿಸುವ ದೃಶ್ಯ ಮಳೆರಾಯನಿಗೆ ಸಲ್ಲುತ್ತಿರುವ ಪೂಜೆ ವಿಶೇಷವಾಗಿತ್ತು.

ಈ ವೇಳೆ ಮಾತನಾಡಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ, ಗ್ರಾಮದ ಯುವಕ ಮಿತ್ರರು ಮಳೆಗಾಗಿ ಮಳಾರಾಯನ ಪೂಜೆ ಸಲ್ಲಿಸುತ್ತಿರುವುದು ಶ್ಲಾಘನೀಯ ಮತ್ತು ವಿಶೇಷ. ಕಳೆದ ವರ್ಷ ಫೆಬ್ರವರಿ ತಿಂಗಳಲ್ಲೇ ವರುಣದೇವನ ಕೃಪೆಯಿಂದ ಸಾಕಷ್ಟು ಮಳೆ ಬಂದು ಕೆರೆಕಟ್ಟೆಗಳು ಹಾಗೂ ಜಲಾಶಯಗಳು ತುಂಬಿ ತುಳುಕಾಡುತ್ತಿದ್ದವು.

ಆದರೆ ಪ್ರಸ್ತುತ ವರ್ಷ ಮಳೆ ಕೊರತೆಯಿಂದ ಅಂತರ್ಜಲ ಕುಸಿತದಿಂದ ಅದೆಷ್ಟೋ ಬೋರ್ವೆಲ್‌ಗಳು ನೀರಿಲ್ಲದೆ ಕೆಟ್ಟು ನಿಂತಿವೆ. ಅರಣ್ಯಗಳಲ್ಲಿ ವಾಸಿಸುವ ಪ್ರಾಣಿ ಪಕ್ಷಿ ಸಂಕುಲಗಳು ನೀರು ಮತ್ತು ಆಹಾರವನ್ನು ಹುಡುಕಿ, ಗ್ರಾಮಗಳತ್ತ ಧಾವಿಸುತ್ತಿರುವುದು ವಿಷಾದನೀಯ. ತಾಪಮಾನ ತೀವ್ರ ಉಷ್ಣಾಂಶವಿರುವುದರಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರಿ, ಉಸಿರಾಟ ಮತ್ತು ರಕ್ತದೊತ್ತಡದಂತಹ ಮಾರಣಾಂತಿಕ ಕಾಯಿಲೆಗಳು ಸಂಭವಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗಳು ಭರ್ತಿಯಾಗಿವೆ. ಬಾಳೆ ಅಡಿಕೆ ಹಿಪ್ಪುನೇರಳೆ, ಕಬ್ಬು, ರಾಗಿ ಬೆಳೆಗಳು ಒಣಗಿ ನಿಂತಿವೆ. ತೆಂಗಿನ ಮರದ ಸುಳಿಗಳು ಒಣಗಿ ನಿಂತಿವೆ. ಆದ್ದರಿಂದ ಸರ್ಕಾರ ಪ್ರಕೃತಿ ವಿಕೋಪದಡಿ ಬರ ಪರಿಹಾರದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.

ಮುಖಂಡ ಶಂಕರ ಮಾತನಾಡಿ, ಮಳೆ ರಾಯನ ಪೂಜೆ ಸಲ್ಲಿಸಿ ದವಸ ಧಾನ್ಯಗಳನ್ನು ಪಡೆದು ಅನ್ನ ಸಂತರ್ಪಣೆಯ ಕಾರ್ಯಕ್ರಮವನ್ನು ಸಹ ಆಯೋಜಿಸಿದ್ದೇವೆ ಎಂದು ತಿಳಿಸಿದರು
ಈ ವೇಳೆ ಆಯೋಜಕರಾದ ಗುಂಡ, ಮಹೇಶ್, ಪ್ರಸನ್ನ, ನಂದೀಶ್, ಸಚಿನ್, ರಾಮಣ್ಣ, ವೆಂಕಟೇಶ್, ಸೋಮು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago