ಮಂಡ್ಯ: ಇಲ್ಲಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನೇಮಕಗೊಂಡ ಬೆನ್ನಲ್ಲೇ ಎಲ್ಲಾ ಯಾತ್ರಾ ಸ್ಥಳಗಳಿಗೆ ಯದುವೀರ್ ಭೇಟಿ ನೀಡುತ್ತಿದ್ದು, ಭರ್ಜರಿಯಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಯದುವೀರ್‌ಗೆ ದೇಗುಲದಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಇದೇ ವೇಳೆ ಪೀಠಾಧಿಪತಿ ಶ್ರೀ ನಿರ್ಮಲಾನಂದ ಸ್ವಾಮೀಜಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ದೇವರ ದರ್ಶನದ ಬಳಿಕ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ರಾಜವಂಶಸ್ಥ ಮಾತುಕತೆ ನಡೆಸಿದರು. ನಂತರ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಗೆ ಯದುವೀರ್ ಪುಷ್ಪ ನಮನ ಸಲ್ಲಿಸಿದರು.
ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಕೂಡ ಭೇಟಿ ನೀಡಿ ಕಾಲಭೈರವೇಶ್ವರನ ದರ್ಶನ ಪಡೆದರು.





