ಮಂಡ್ಯ: ರೋಗವನ್ನು ದೂರವಿಟ್ಟಿ ಆರೋಗ್ಯವನ್ನು ವೃದ್ಧಿಸುವ ಶಕ್ತಿ ಯೋಗಾಭ್ಯಾಸಕ್ಕೆ ಇದೆ. ಯೋಗ ಎಂಬುದು ದಿನನಿತ್ಯ ರೂಡಿಸಿಕೊಂದರೆ, ಅದು ಹಣ ಕಟ್ಟದೆ ಸ್ವಂತ ಶ್ರಮದಿಂದ ಪಡೆಯುವ ಆರೋಗ್ಯ ವಿಮೆ ಇದ್ದಂತೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಭಿಪ್ರಾಯಪಟ್ಟರು.
ಅವರು ಇಂದು(ಜೂ.21) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 10 ನೇ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಯೋಗ ಮನಸ್ಸು ಹಾಗೂ ದೇಹದ ಆರೋಗ್ಯಕ್ಕೆ ಪೂರಕವಾಗಿದ್ದು, ಯೋಗವನ್ನು ಸಂಜೀವಿನಿ ಎಂದು ಕರೆಯಬಹುದು. ಪ್ರತಿಯೊಬ್ಬರೂ ದಿನದ 24 ಗಂಟೆಯಲ್ಲಿ ಒಂದು ಗಂಟೆ ಯೋಗಾಭ್ಯಾಸಕ್ಕೆ ಮೀಸಲಿಡಿ ಎಂದರು.
ಯೋಗ ಬಲ್ಲವನಿಗೆ ರೋಗದ ಭಯವಿಲ್ಲ, ರೋಗ ಇರುವವನಿಗೆ ಯೋಗದ ಅರಿವಿಲ್ಲ. ರೋಗ ಬರುವ ಮುಂಚೆ ಯ ಯೋಗಾಭ್ಯಾಸ ಮಾಡುವ ಯೋಗ ನಮ್ಮದಾಗಲಿ ಎಂದು ಹೇಳಿದರು.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರದಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮನಂದ ನಾಥ ಸ್ವಾಮೀಜಿ, ಮಾತನಾಡಿ ದೇಹ ದಂಡನೆ ಮಾಡಲು ಹೋಗಿ ಎಷ್ಟೋ ಜನರು ಪ್ರಾಣ ಕುತ್ತು ತಂದು ಕೊಂಡಿರುವವರು ಕೂಡ ಇದ್ದಾರೆ, ಆದರೆ ಯೋಗ ಮಾಡುವುದರಿಂದ ಯಾವುದೇ ತರಹ ಪ್ರಾಣ ಹಾನಿ ಇಲ್ಲ, ಹಣ ಖರ್ಚು ಮಾಡುವ ಆಗಿಲ್ಲ. ಹೆಚ್ಚು ಶ್ರಮ ಕೂಡ ಹಾಕುವ ಆಗಿಲ್ಲ ಆದ್ದರಿಂದ ಪ್ರತಿಯೊಬ್ಬರು ಕೂಡ ಯೋಗವನ್ನು ಮಾಡಿ ಮನಸ್ಸಿನ ನೆಮ್ಮದಿಯನ್ನು ಪಡೆದುಕೊಳ್ಳಿ ಎಂದು ಹೇಳಿದರು.
ಯೋಗಾಭ್ಯಾಸವನ್ನು ಕೇವಲ ಒಂದು ದಿನ ಮಾಡಿದರೆ ಸಾಲದು ಅದರ ಪ್ರಯೋಜನ ಕಂಡುಕೊಳ್ಳಬೇಕು ಎಂದರೆ ಪ್ರತಿನಿತ್ಯ ಯೋಗಾಭ್ಯಾಸವನ್ನು ಮಾಡಬೇಕು ಎಂದು ತಿಳಿಸಿದರು.
ಶ್ರೀರಂಗಪಟ್ಟಣ ಬೇಬಿ ಮಠ ಮತ್ತು ಚಂದ್ರವನಾಶ್ರಮ ಪೀಠಧ್ಯಕ್ಷರಾದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮಾತಾನಾಡಿ, ಇಡೀ ವಿಶ್ವಕ್ಕೆ ಯೋಗ ಪರಿಚಯಿಸಿದ ಹೆಮ್ಮೆ ಭಾರತ ದೇಶಕ್ಕಿದೆ. ಇಂದು ಎಲ್ಲಾ ರಾಷ್ಟ್ರಗಳ ಜೊತೆಗೆ ಏಕಕಾಲಿಕವಾಗಿ ಯೋಗದಿನಾಚರಣೆಯನ್ನು ಆಚರಿಸಲಾಗುತ್ತದೆ ಇದು ದೇಶದ ಹೆಗ್ಗಳಿಕೆ ಎಂದರು.
ದೇಹವನ್ನು ದಂಡಿಸದೆ ದೇಹಕ್ಕೆ ಹಾಗೂ ಮನಸ್ಸಿಗೆ ಉಲ್ಲಾಸ ಕೊಡುವ ಜೊತೆಗೆ ಸದೃಢ ಆರೋಗ್ಯವನ್ನು ಹೊಂದಲು ಯೋಗ ಬಹಳ ಉಪಯುಕ್ತವಾಗಿದೆ. ಶಾಲಾ ಪಠ್ಯ ಪುಸ್ತಕದಲ್ಲಿ ಎಲ್ಲಾ ವಿಷಯದ ಬಗ್ಗೆ ಪಾಠಗಳನ್ನು ಅಳವಡಿಸಿದ್ದಾರೆ ಅದೇ ರೀತಿ ಪಠ್ಯ ಪುಸ್ತಕ ದಲ್ಲಿ ಯೋಗ ಶಾಸ್ತ್ರವನ್ನು ಅಳವಡಿಸಿದರೆ ಆರೋಗ್ಯದ ಬಗ್ಗೆ ಅರಿವು ಹೆಚ್ಚಾಗುತ್ತದೆ ಎಂದು ಹೇಳಿದರು.
ಯೋಗಾಭ್ಯಾಸದಿಂದ ಅಂಗಾಂಗಗಳು ಬಲವಾಗುತ್ತವೆ, ಕಣ್ಣುಗಳು ದೃಷ್ಟಿ ಚೆನ್ನಾಗಿರುತ್ತದೆ, ಯಾವುದೇ ಅನಾರೋಗ್ಯವು ಸಹ ನಮ್ಮ ಬಳಿ ಸುಳಿಯುವುದಿಲ್ಲ ಆದ್ದರಿಂದ ದಿನ ನಿತ್ಯ ಯೋಗಾಭ್ಯಾಸ ಮಾಡಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜ್, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಸೀತಾಲಕ್ಷ್ಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಓಂ ಪ್ರಕಾಶ್, ನೆಹರು ಯುವ ಕೇಂದ್ರದ ಅಧಿಕಾರಿ ರಾಜೇಶ್ ಕಾರಂತ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಶಂಕರನಾರಾಯಣ ಶಾಸ್ತ್ರಿ, ರೆಡ್ ಕ್ರಾಸ್ ಸಂಸ್ಥೆಯ ಗೌರವಾಧ್ಯಕ್ಷರಾದ ಮೀರಾಶಿವಲಿಂಗಯ್ಯ, , ಭಾರತ ಸ್ಕೌಟ್ಸ್ ಅಂಡ್ ಗೈಡ್ ನ ಭಕ್ತವತ್ಸಲ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…