Mysore
24
overcast clouds

Social Media

ಗುರುವಾರ, 01 ಮೇ 2025
Light
Dark

ಉಕ್ಕಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಯುವಕ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ.

ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನೀರಿನ ರಭಸಕ್ಕೆ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ಈ ಘಟನೆ ನಡೆದಿದ್ದು, ಯುವಕ ನದಿಯಲ್ಲಿ ಕೊಚ್ಚಿಕೊಂಡು ಹೋದ ದೃಶ್ಯ ಪ್ರವಾಸಿಗರರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಕೊಚ್ಚಿ ಹೋದ ಯುವಕನ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಸಂಬಂಧ ಹಲಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags: