ಮದ್ದೂರು: ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ 35 ವರ್ಷದ ಅರುಣ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಅರುಣ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ನಿನ್ನೆ ತಾನೇ ಗ್ರಾಮಕ್ಕೆ ಬಂದಿದ್ದು, ಸಂಜೆ ಕೆಸ್ತೂರು ಸರ್ಕಲ್ ಬಳಿ ಇರುವ ಬಾರ್ ಅಂಡ್ ರೆಸ್ಟೋರೆಂಟ್ ಸ್ನೇಹಿತರೊಂದಿಗೆ ಸೇರಿ ಪಾನಮತ್ತನಾಗಿದ್ದ. ಈ ವೇಳೆ ಅವನು ಕುಳಿತಿದ್ದ ಪಕ್ಕದ ಟೇಬಲ್‌ನಲ್ಲಿ ಜಗಳ ನಡೆಯುತ್ತಿತ್ತು. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ತೀವ್ರ ಸ್ವರೂಪ ಪಡೆದುಕೊಂಡಿತ್ತು.
ನಂತರ ಅರುಣ್ ಹಾಗೂ ಸ್ನೇಹಿತರು ಸ್ಥಳದಿಂದ ಹೊರಟಾಗ ಹಿಂದಿನಿಂದಲೇ ಬಂದ ಪಾನಮತ್ತ ಯುವಕರು ಡ್ರ್ಯಾಗನ್ ಹಾಗೂ ಲಾಂಗ್‌ನಿಂದ ಅರುಣ್‌ಗೆ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ. ಕದಲೂರು ಸ್ಕಂದನ್ ಲೇಔಟ್ ಹೋಗುವ ರಸ್ತೆಯ ಪಕ್ಕದ ಅರುಣ್ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಯಾದ ಅರುಣ್ ಶವವನ್ನು ಮಂಡ್ಯ ವಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…