ಮಂಡ್ಯ: ಅನ್ಯಕೋಮಿನ ಯುವಕನ ಜೊತೆ ಯುವತಿ ರಾತ್ರೋರಾತ್ರಿ ಎಸ್ಕೇಪ್ ಆಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮದಲ್ಲಿ ನಡೆದಿದೆ.
ಚಿನಕುರುಳಿ ಗ್ರಾಮದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ಹಾಗೂ ಅನ್ಯಕೋಮಿನ ಯುವಕನ ನಡುವೆ ಕಳೆದ ಕೆಲ ತಿಂಗಳುಗಳಿಂದ ಪ್ರೇಮಾಂಕುರವಾಗಿತ್ತು.
ಮಟನ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಅನ್ಯಕೋಮಿನ ಯುವಕನ ಜೊತೆ ಚಿನಕುರುಳಿಯಲ್ಲಿ ವಾಸವಿದ್ದ ಯುವತಿ ಎಸ್ಕೇಪ್ ಆಗಿದ್ದಾಳೆ. ರಾತ್ರಿ ಮನೆ ಬಿಟ್ಟ ಯುವತಿಯು ಯುವಕನ ಜೊತೆ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಡ್ಯ ಪೊಲೀಸ್ ಇಲಾಖೆ ಡಿಎಆರ್ ತುಕಡಿ ನಿಯೋಜನೆ ಮಾಡಲಾಗಿದ್ದು, ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





