ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಯುವತಿಯನ್ನು ರಕ್ಷಿಸಲಾಗಿದೆ. ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿಯನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಣೆ ಮಾಡಿದ್ದಾರೆ.
ಬೆಂಗಳೂರು ಮೂಲದ ಯುವತಿ ಮನೆಯಲ್ಲಿ ಗಲಾಟೆ ಮಾಡಿಕೊಂಡು ಬಂದು ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಅಸ್ವಸ್ಥ ಯುವತಿಯನ್ನು ಶ್ರೀರಂಗಪಟ್ಟಣ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




