Mysore
23
light rain

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಶ್ರೀರಂಗಪಟ್ಟಣ| ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಯುವಕನ‌ ಬಂಧನ

ಶ್ರೀರಂಗಪಟ್ಟಣ: ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಯುವಕನ‌ನ್ನು ಪಟ್ಟಣದ ಅಬಕಾರಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಶ್ರೀರಂಗಪಟ್ಟಣ- ಕೆ.ಆರ್.ಪೇಟೆ ಮುಖ್ಯ ರಸ್ತೆ ಮಾರ್ಗದಲ್ಲಿ ಬರುವ ಹರವು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲೆಕೆರೆ ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಮಾರುತಿ 800 ಕಾರ್ ನಲ್ಲಿ 2.040 ಕೆ.ಜಿ ಒಣ ಗಾಂಜಾವನ್ನು ಸಾಗಿಸುತ್ತಿದ್ದ ಪಾಂಡವಪುರ ಟೌನ್ ನಿವಾಸಿ ಯೂನಸ್ ಏ ಬಿನ್ ಅಜ್ಮಲ್(23) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಶ್ರೀರಂಗಪಟ್ಟಣ ವಲಯದ ಅಬಕಾರಿ ನಿರೀಕ್ಷಕರಾದ ಪ್ರಪುಲ್ಲ ಚಂದ್ರ ವೈ.ಜೆ ಇವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

Tags:
error: Content is protected !!