ಮಂಡ್ಯ

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

  1. ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು
    ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟ ದುರ್ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
    ಮೃತ ಯುವಕನು ಬೆಂಗಳೂರಿನ ಬೊಮ್ಮನಹಳ್ಳಿ ವಾರ್ಡ್ ನಿವಾಸಿ ನಿಂಗೇಗೌಡ ಅವರ ಪುತ್ರ ಎನ್. ಶ್ರೇಯಸ್(೧೯) ಎಂದು ಗುರುತಿಸಲಾಗಿದೆ.
    ಈತ ಜಯನಗರದ ಎಸ್‌ಎಸ್‌ಆರ್‌ಎಂವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದನು. ಐವರು ಸ್ನೇಹಿತರೊಂದಿಗೆ ಹಲಗೂರು ಸಮೀಪದ ಬೆನಮನಹಳ್ಳಿ ಗ್ರಾಮದ ಚೇತನ್ ಅವರ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಬಂದಿದ್ದನು.
    ಕಾರ್ಯಕ್ರಮ ಮುಗಿದ ನಂತರ ಮುತ್ತತ್ತಿ ಪ್ರವಾಸಿ ತಾಣಕ್ಕೆ ತೆರಳಿದ ವೇಳೆ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದಾನೆ. ಈ ಸಂದರ್ಭದಲ್ಲಿ ನೀರಿನ ಸುಳಿಗೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
    ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

22 mins ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

26 mins ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

30 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

1 hour ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

1 hour ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

2 hours ago