ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ರಾಜಮೂರ್ತಿ ನಗರದ ವಿಘ್ನೇಶ್ (27) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಇನ್ಫೋಸಿಸ್ ಉದ್ಯೋಗಿಯಾಗಿದ್ದ ವಿಘ್ನೇಶ್, ಮೂವರು ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಶ್ರೀರಂಗಪಟ್ಟಣದ ಎಡಮುರಿಯಲ್ಲಿನ ಕಾವೇರಿ ನದಿಯಲ್ಲಿ ಈಜಾಡಾತ್ತಿದ್ದರು. ನದಿಯಲ್ಲಿನ ಆಳವಾದ ಜಾಗವನ್ನು ಅರಿಯದೆ ಅವರು ಮುಳುಗಿದ್ದಾರೆ. ತಕ್ಷಣ ವಿಘ್ನೇಶ್ ಸಹಾಯಕ್ಕೆ ಸ್ನೇಹಿತರನ್ನು ಕರೆದಿದ್ದಾರೆ. ನೀರಿನಲ್ಲಿ ಮುಳುಗಿದ ಅವರನ್ನು ರಕ್ಷಣೆ ಮಾಡಲು ಸ್ನೇಹಿತರಿಗೆ ಸಾಧ್ಯವಾಗಿಲ್ಲ.
ಕೃಷ್ಣರಾಜಸಾಗರ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಬಂದು, ಶವ ಹೊರತೆಗೆದು ಮೈಸೂರು ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…