ಮಂಡ್ಯ : ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ದುಷ್ಕೃತ್ಯ ಮಳವಳ್ಳಿ ತಾಲ್ಲೂಕಿನ ಅವ್ವೇರಹಳ್ಳಿ – ದೊಡ್ಡಬೂಹಳ್ಳಿ ನಡುವಿನ ಕಾಲುವೆ ರಸ್ತೆಯಲ್ಲಿ ನಡೆದಿದೆ.
ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ಮಹದೇವಸ್ವಾಮಿ ಎಂಬವರ ಪುತ್ರ ಮೋಹನ್ ಕುಮಾರ್ (೨೪) ಕೊಲೆಯಾಗಿರುವ ಯುವಕ.
ಗುರುವಾರ ರಾತ್ರಿ ೧೦.೩೦ರ ಸಮಯದಲ್ಲಿ ಈತ ಅವ್ವೇರಹಳ್ಳಿ ದೊಡ್ಡಬೂಹಳ್ಳಿ ನಡುವಿನ ಕಾಲುವೆ ರಸ್ತೆಯ ಬಳಿ ಸತ್ತು ಬಿದ್ದಿದ್ದು, ಯಾರೋ ದುಷ್ಕರ್ಮಿಗಳು ಮುಖದ ಮೇಲೆಲ್ಲ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈತನ ಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಸಿಪಿಐ ಶ್ರೀಧರ್ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ಮೃತನ ತಂದೆ ಮಹದೇವಸ್ವಾಮಿ ನೀಡಿದ ದೂರಿನ ಮೇರೆಗೆ ಬೆಳಕವಾಡಿ ಪಿಎಸ್‌ಐ ಪ್ರಕಾಶ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…