ಜಿಲ್ಲೆಗಳು

ಚುನಾವಣೆಗೂ ಮುನ್ನವೇ ಮ್ಯಾಚ್ ಪಿಕ್ಸ್ : ಅಪ್ಪಂದಿರ ಪರ ಮಕ್ಕಳು ಅಖಾಡಕ್ಕೆ

ಚುನಾವಣೆಗೂ ಮುನ್ನವೇ ಮ್ಯಾಚ್ ಪಿಕ್ಸ್

ಯುವಕರೊಂದಿಗೆ ಸಮಾಲೋಚನೆ, ಹಿರಿಯರ ಭೇಟಿ; ಮತ ಸೆಳೆಯಲು ನಾನಾ ರೀತಿಯ ಕಸರತ್ತು

* ಕ್ಷೇತ್ರ ಗೆಲ್ಲಲು ಖುದ್ದು ರಣಾಂಗಣಕ್ಕೆ ಇಳಿದ ಯುವ ನಾಯಕರು

* ಹುಣಸೂರು ಕ್ಷೇತ್ರದ ಜತೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಜಿ.ಡಿ.ಹರೀಶ್‌ಗೌಡರ ಹವಾ

* ಪಿರಿಯಾಪಟ್ಟಣ, ಹುಣಸೂರು, ಕೆ.ಆರ್.ನಗರದಲ್ಲಿ ಶಾಸಕರ ಮಕ್ಕಳ ಓಡಾಟ

* ಟಿಕೆಟ್ ನಿರೀಕ್ಷೆಯಲ್ಲಿ ಕಾದುಕುಳಿತಿರುವ ಸುನಿಲ್ ಬೋಸ್

* ಅಪ್ಪ ಸ್ಪರ್ಧಿಸದಿದ್ದಲ್ಲಿ ಮತ್ತೊಮ್ಮೆ ಅಖಾಡಕ್ಕಿಳಿಯಲು ಸಜ್ಜಾದ ಡಾ.ಯತೀಂದ್ರ

ಕೆ.ಬಿ.ರಮೇಶನಾಯಕ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದೊಂದಿಗೆ ಅಧಿಕಾರದ ಗದ್ದುಗೆ ಏರಲು ಪ್ರಮುಖ ರಾಜಕೀಯ ಪಕ್ಷಗಳು ತಾಲೀಮು ಆರಂಭಿಸಿರುವಾಗಲೇ ಮೈಸೂರು ಜಿಲ್ಲೆಯಲ್ಲಿ ಅಪ್ಪಂದಿರ ಪರವಾಗಿ ಮಕ್ಕಳು ಚುನಾವಣಾ ಅಖಾಡಕ್ಕೆ ಧುಮುಕಿ ಯುವ ಹವಾ ಮೂಡಿಸಲು ಮುಂದಾಗಿದ್ದಾರೆ.

ಈ ಬಾರಿಯ ಚುನಾವಣೆ ರಾಜಕೀಯ ಪಕ್ಷಗಳು ಹಾಗೂ ಆಕಾಂಕ್ಷಿಗಳಿಗೆ ಮಾಡು ಇಲ್ಲವೇ ಮಡಿ ಎನ್ನುವಂತಾಗಿರುವ ಕಾರಣ ತಂದೆಯಂದಿರ ಗೆಲುವಿಗಾಗಿ ಶ್ರಮಿಸಲು ಕ್ಷೇತ್ರದಲ್ಲಿ ಮಕ್ಕಳು ಬಿರುಸಿನ ಓಡಾಟ ಆರಂಭಿಸಿದ್ದಾರೆ. ಯುವ ಮತದಾರರನ್ನು ಸೆಳೆಯುವ ಎಲ್ಲ ರೀತಿಯ ತಂತ್ರಗಳನ್ನೂ ಮಾಡುತ್ತಿರುವುದರಿಂದ ಹಳ್ಳಿಗಳಲ್ಲಿ ಯುವಕರದ್ದೇ ಕಾರುಬಾರಾಗಿದೆ.


ತಂದೆ ಕ್ಷೇತ್ರದ ಜತೆಗೆ ಹುಣಸೂರಿನಲ್ಲಿ ಓಡಾಟ:
ಹುಣಸೂರು ಕ್ಷೇತ್ರದ ಜಾ.ದಳ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಯೂತ್ ಐಕಾನ್ ಆಗಿರುವ ಕಾರಣ ಅನೇಕ ಗ್ರಾಮಗಳಲ್ಲಿ ಹರೀಶ್‌ಗೌಡರೇ ಓಡಾಡುವಂತಾಗಿದೆ. ಬೆಳಿಗ್ಗೆಯಿಂದ ರಾತ್ರಿ ತನಕ ಹುಣಸೂರು ಕ್ಷೇತ್ರದಲ್ಲಿ ಪ್ರವಾಸಮಾಡುತ್ತಿರುವ ಹರೀಶ್‌ಗೌಡರಿಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಬಾರೀ ಬೇಡಿಕೆ ಇದೆ. ಜಿ.ಟಿ.ದೇವೇಗೌಡರ ಪರವಾಗಿ ಕೆಲಸಮಾಡುತ್ತಿರುವ ಅನೇಕರು ವಾರದಲ್ಲಿ ಎರಡು ದಿನ ಚಾಮುಂಡೇಶ್ವರಿ ಕ್ಷೇತ್ರದ ಹಳ್ಳಿಗಳಿಗೆ ಕಳುಹಿಸುವಂತೆ ದುಂಬಾಲು ಬಿದ್ದಿರುವುದರಿಂದ ಎರಡೂ ಕ್ಷೇತ್ರಗಳಲ್ಲಿ ಓಡಾಡುವಂತಾಗಿದೆ. ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯಲು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ನಿರ್ಧರಿಸಿದ್ದರೂ ಕೊನೆ ಕ್ಷಣದಲ್ಲಿ ವರುಣದಲ್ಲಿ ನಿಲ್ಲಬಹುದೆಂಬ ನಿರೀಕ್ಷೆ ಇದೆ. ಒಂದು ವೇಳೆ ಸ್ಪರ್ಧಿಸದಿದ್ದಲ್ಲಿ ಮತ್ತೊಮ್ಮೆ ಅಖಾಡಕ್ಕಿಳಿಯಲು ಡಾ.ಯತೀಂದ್ರ ಸಿದ್ದರಾಮಯ್ಯ, ವಾರದಿಂದ ಹಳ್ಳಿಗಳ ಪ್ರವಾಸ ಕೈಗೊಂಡಿದ್ದಾರೆ. ಶಾಸಕರ ನಿಧಿ ಸೇರಿ ಇನ್ನಿತರ ಅನುದಾನದಿಂದ ಆಗಿರುವ ಕಾಮಗಾರಿಗಳನ್ನು ಉದ್ಘಾಟಿಸುವ ಮೂಲಕ ಗಮನ ಸೆಳೆದಿದ್ದಾರೆ.


ತ್ರಿ ಕ್ಷೇತ್ರದಲ್ಲಿ ಮಕ್ಕಳ ಅಬ್ಬರ:
ಕೆ.ಆರ್.ನಗರದಲ್ಲಿ ಒಂದು ವರ್ಷದಿಂದ ಶಾಸಕ ಸಾ.ರಾ.ಮಹೇಶ್ ಅನುಪಸ್ಥಿತಿಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದ ಸಾ.ರಾ.ಜಯಂತ್ ಈಗ ಬಹಿರಂಗವಾಗಿ ಅಖಾಡಕ್ಕೆ ಧುಮುಕಿದ್ದಾರೆ. ಕೆ.ಆರ್.ನಗರ, ಸಾಲಿಗ್ರಾಮ ತಾಲ್ಲೂಕಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಸೇರಿದಂತೆ ಬೇರೆ ಬೇರೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಭಾಷಣ ಮಾಡುವ ಮೂಲಕ ತಂದೆಯ ಪರವಾಗಿ ನಿಲ್ಲುವಂತೆ ಮನವಿ ಮಾಡುತ್ತಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ಶಾಸಕ ಎಚ್.ಪಿ.ಮಂಜುನಾಥ್ ಪರವಾಗಿ ಪುತ್ರ ಪವನ್ ಕೆಲಸ ಮಾಡುತ್ತಿದ್ದಾರೆ. ಯುವಕ ಸಂಘಗಳ ಪ್ರಮುಖರು, ಯುವಕರನ್ನು ಭೇಟಿ ಮಾಡುತ್ತಿದ್ದಾರೆ, ಅನೇಕ ಕಡೆಗಳಲ್ಲಿ ಪವನ್ ಫ್ಲೆಕ್ಸ್‌ಗಳು ರಾರಾಜಿಸುವ ರೀತಿಯಲ್ಲಿ ಅಭಿಮಾನಿಗಳು ಹಾಕುತ್ತಿದ್ದು, ಈ ಕ್ಷೇತ್ರದಲ್ಲಿ ಜಿ.ಡಿ.ಹರೀಶ್‌ಗೌಡರ ಸ್ಪರ್ಧೆಯಿಂದಾಗಿ ಯುವಕರ ನಡುವೆ ಪೈಪೋಟಿಗೆ ಕಾರಣವಾಗಿದೆ. ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಶಾಸಕ ಕೆ.ಮಹದೇವ ಪರ ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಭರ್ಜರಿ ಪ್ರಚಾರ ಮಾಡುತ್ತಿದ್ದು, ಹಾಲು ಉತ್ಪಾದಕರ, ಪಿಎಸಿಸಿ ಬ್ಯಾಂಕ್‌ಗಳ ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಮತದಾರರಿಗೆ ಮೋಡಿ ಮಾಡಲು ಹೊರಟಿದ್ದಾರೆ.


ಟಿಕೆಟ್ ನಿರೀಕ್ಷೆಯೊಂದಿಗೆ ಪ್ರಚಾರ:
ತಿ.ನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಸುನಿಲ್ ಬೋಸ್ ಐದು ವರ್ಷಗಳಿಂದ ನಿರಂತರವಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದು, ಒಂದು ವೇಳೆ ಕುಟುಂಬದ ಇಬ್ಬರಿಗೆ ಟಿಕೆಟ್ ಸಿಗುವುದು ಅಸಾಧ್ಯವಾದಾಗ ತಂದೆ ಡಾ.ಎಚ್.ಸಿ.ಮಹದೇವಪ್ಪ ಪರವಾಗಿ ಕೆಲಸ ಮಾಡಬೇಕಾಗಿದೆ. ಇದೇ ರೀತಿ ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಬೀಚನಹಳ್ಳಿ ಚಿಕ್ಕಣ್ಣ ಅವರಿಗೆ ಟಿಕೆಟ್ ಕೊಡುವ ಮಾತನ್ನಾಡಿದ್ದರೂ ಅಧಿಕೃತವಾಗಿ ಘೋಷಣೆಯಾಗಿಲ್ಲ. ಆದರೆ, ಪುತ್ರ ಜಯಪ್ರಕಾಶ್ ಕುಟುಂಬದಲ್ಲಿ ಯಾರಾದರೂ ಒಬ್ಬರು ನಿಲ್ಲುವುದು ಖಚಿತವೆಂದು ಕೆಲಸ ಮಾಡುತ್ತಿದ್ದಾರೆ. ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರ ಪುತ್ರ ಕವೀಶ್‌ಗೌಡ ಬಿಜೆಪಿ ಸೇರ್ಪಡೆಯಾಗಿದ್ದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸದ್ದಿಲ್ಲದೆ ಕೆಲಸದಲ್ಲಿ ತೊಡಗಿದ್ದಾರೆ. ಮತ್ತೊಂದು ಕುತೂಹಲದ ಸಂಗತಿಯೆಂದರೆ ಶಾಸಕ ಎಸ್.ಚಿಕ್ಕಮಾದು ಪುತ್ರಿ ಸಿ.ರಂಜಿತ ಅವರು ಜಾ.ದಳ ಸೇರಿ ಹುಣಸೂರು ಕ್ಷೇತ್ರದಲ್ಲಿ ಪ್ರಚಾರಕ್ಕೆ ಧುಮುಕಿದ್ದು, ಈತನಕ ಸಹೋದರ ಅನಿಲ್ ಚಿಕ್ಕಮಾದು ಸ್ಪರ್ಧಿಸುವ ಎಚ್.ಡಿ.ಕೋಟೆ ಕ್ಷೇತ್ರಕ್ಕೆ ಕಾಲಿಟ್ಟಿಲ್ಲ. ಅಪ್ಪಂದಿರ ಗೆಲುವಿಗೆ ಶ್ರಮಿಸುವ ಜತೆಗೆ ಮುಂದಿನ ದಿನಗಳಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಹೊರಟಿದ್ದಾರೆ.


ಯುವ ನಾಯಕರ ತಂತ್ರಗಳೇನು?
ಮೈಸೂರು: ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಸ್ಪರ್ಧಾಕಾಂಕ್ಷಿಗಳಾಗಿರುವ ಹಾಲಿ ಶಾಸಕರು ಹಾಗೂ ಟಿಕೆಟ್ ನಿರೀಕ್ಷೆಯಲ್ಲಿರುವ ಆಕಾಂಕ್ಷಿಗಳ ಮಕ್ಕಳು ತಂತಮ್ಮ ತಂದೆಯಂದಿರ ಪರವಾಗಿ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ಯುವಕರೊಂದಿಗೆ ಸಮಾಲೋಚನೆ ಮಾಡುವುದು, ಹಿರಿಯರನ್ನು ಭೇಟಿ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನರಾಮ್, ವಾಲ್ಮೀಕಿ, ಬಸವೇಶ್ವರರ ಹೆಸರಿನಲ್ಲಿ ಆಯೋಜಿಸುವ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಯುವಕರನ್ನು ಸೆಳೆಯುವ ಕೆಲಸದಲ್ಲಿ ತೊಡಗಿದ್ದು, ಇದರಿಂದಾಗಿ ಅನೇಕರು ಶಾಸಕರ ಬದಲಿಗೆ ಮಕ್ಕಳ ನಾಯಕತ್ವವನ್ನೇ ಹಿಂಬಾಲಿಸುತ್ತಿರುವುದು ಗಮನಾರ್ಹವಾಗಿದೆ.

 

 

 

 

 

 

 

 

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

7 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

9 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

10 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

10 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

10 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

10 hours ago