Mysore
26
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಆರೋಗ್ಯ ಕ್ಷೇತ್ರದಲ್ಲಿ ನಾವು ಮುಂದಡಿ ಹೆಜ್ಜೆ ಇಟ್ಟಿದ್ದೇವೆ : ಸಚಿವ ಡಾ.ಕೆ.ಸುಧಾಕರ್

ಮೈಸೂರು : ನಗರದ ಜೆ.ಕೆ.ಮೈದಾನದ ಆಲ್ಯುಮಿನಿ‌ ಅಸೋಸಿಯೇಷನ್ ಸಭಾಂಗಣದಲ್ಲಿ ಇಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿವಿಧ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಆರೋಗ್ಯ ಕ್ಷೇತ್ರಕ್ಕೆ ಐತಿಹಾಸಿಕ ಕ್ಷಣ. ಮೈಸೂರು ವೈದ್ಯಕೀಯ ಕಾಲೇಜು ಮೊದಲನೆಯದು. ನೂರು ಕೋಟಿ ಗೂ.ಹೆಚ್ಚು ಮೊತ್ತದಲ್ಲಿ ಕಟ್ಟಡಗಳ ಉದ್ಘಾಟನೆ ಮಾಡಲಾಗುವುದು ಎಂದರು.

ಮುಂದುವರಿದು, ಟೆಲಿ ಐಸಿಯು ಸಂಪರ್ಕ ಜಾಲದೊಂದಿಗೆ ತ್ವರಿತ ಸೇವೆ. ಗ್ರಂಥಾಲಯ, ಬೋಧನಾ ಕೊಠಡಿ,ವಸತಿ ನಿಲಯಗಳು ಸಿದ್ದವಾಗಿದ್ದು, ಹಬ್ ಅಂಡ್ ಸ್ಫೋಕನ್ ಮಾಡೆಲ್ ನಲ್ಲಿ ದೂರದ ಬೀದರ್, ರಾಯಚೂರು ಜಿಲ್ಲೆಯ ಜನರಿಗೂ ಸಿಗಬೇಕು. ಆರೋಗ್ಯ ಕ್ಷೇತ್ರದಲ್ಲಿ ಮುಂದಡಿ ಹೆಜ್ಜೆ ಇಟ್ಟಿದೆ ಎಂದರು.

ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಸ್.ಎ.ರಾಮದಾಸ್, ನಿಗಮ ಮಂಡಳಿಗಳ‌ ಅಧ್ಯಕ್ಷರಾದ ಎಸಗ.ಮಹದೇವಯ್ಯ, ಎಂ.ಶಿವಕುಮಾರ್, ಮಿರ್ಲೆ ಶ್ರೀನಿವಾಸ್ ಗೌಡ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ,ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!