ಮೈಸೂರು : ನಗರದ ಜೆ.ಕೆ.ಮೈದಾನದ ಆಲ್ಯುಮಿನಿ ಅಸೋಸಿಯೇಷನ್ ಸಭಾಂಗಣದಲ್ಲಿ ಇಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿವಿಧ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಆರೋಗ್ಯ ಕ್ಷೇತ್ರಕ್ಕೆ ಐತಿಹಾಸಿಕ ಕ್ಷಣ. ಮೈಸೂರು ವೈದ್ಯಕೀಯ ಕಾಲೇಜು ಮೊದಲನೆಯದು. ನೂರು ಕೋಟಿ ಗೂ.ಹೆಚ್ಚು ಮೊತ್ತದಲ್ಲಿ ಕಟ್ಟಡಗಳ ಉದ್ಘಾಟನೆ ಮಾಡಲಾಗುವುದು ಎಂದರು.
ಮುಂದುವರಿದು, ಟೆಲಿ ಐಸಿಯು ಸಂಪರ್ಕ ಜಾಲದೊಂದಿಗೆ ತ್ವರಿತ ಸೇವೆ. ಗ್ರಂಥಾಲಯ, ಬೋಧನಾ ಕೊಠಡಿ,ವಸತಿ ನಿಲಯಗಳು ಸಿದ್ದವಾಗಿದ್ದು, ಹಬ್ ಅಂಡ್ ಸ್ಫೋಕನ್ ಮಾಡೆಲ್ ನಲ್ಲಿ ದೂರದ ಬೀದರ್, ರಾಯಚೂರು ಜಿಲ್ಲೆಯ ಜನರಿಗೂ ಸಿಗಬೇಕು. ಆರೋಗ್ಯ ಕ್ಷೇತ್ರದಲ್ಲಿ ಮುಂದಡಿ ಹೆಜ್ಜೆ ಇಟ್ಟಿದೆ ಎಂದರು.
ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಸ್.ಎ.ರಾಮದಾಸ್, ನಿಗಮ ಮಂಡಳಿಗಳ ಅಧ್ಯಕ್ಷರಾದ ಎಸಗ.ಮಹದೇವಯ್ಯ, ಎಂ.ಶಿವಕುಮಾರ್, ಮಿರ್ಲೆ ಶ್ರೀನಿವಾಸ್ ಗೌಡ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ,ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್ ಹಾಜರಿದ್ದರು.
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್…
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…