ಮೈಸೂರು: ನ್ಯಾಯಾಂಗಕ್ಕೆ ಸಂಬಂದಿಸಿದ ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ವೈದ್ಯಕೀಯ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. ವೈದ್ಯರ ನೆರವಿಲ್ಲದೆ ಕೆಲ ಪ್ರಕರಣಗಳು ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಉಪ ಲೋಕಾಯುಕ್ತ ಹಾಗೂ ನ್ಯಾಯಾಧೀಶರಾದ ಕೆ.ಎನ್. ಫಣೀಂದ್ರ ಅಭಿಪ್ರಾಯಪಟ್ಟರು. ಫಣೀಂದ್ರ
ಶುಕ್ರವಾರ ನಗರದ ಬನ್ನಿಮಂಟಪದ ಬಳಿ ಇರುವ ಜೆಎಸ್‌ಎಸ್ ಔಷಧ ವಿಜ್ಞಾನ ಕಾಲೇಜಿನ ಫೋರೆನ್ಸಿಕ್ ವಿಭಾಗ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ‘ಕಮಲ್ಸಕಾನ್-೨೦೨೨’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಾಂಗ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಸಾಕಷ್ಟು ಸಂಬಂದವಿದೆ. ಕೊಲೆಯಂತಹ ಪ್ರಕರಣಗಳಲ್ಲಿ ಫೊರೆನ್ಸಿಕ್ ವಿಭಾಗದ ಪಾತ್ರ ಹೆಚ್ಚಿದೆ. ವಿಚಾರಣೆ ವೇಳೆ ವೈದ್ಯರು ನೀಡುವ ಹೇಳಿಕೆ ಹಾಗೂ ವರದಿಗಳು ಬಹಳ ಮಹತ್ವವನ್ನು ಪಡೆದುಕೊಳ್ಳುತ್ತವೆ ಎಂದು ಹೇಳಿದರು.
ವೈದ್ಯರಾಗುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನೀವು ಕಲಿತದ್ದನ್ನು ಸಮಾಜ ಸೇವೆಯಂತಹ ಉದ್ದೇಶಕ್ಕೆ ಬಳಸಿಕೊಂಡಲ್ಲಿ ನಿಮ್ಮ ವಿದ್ಯೆ ಸಾರ್ಥಕವಾಗುತ್ತದೆ. ದೇಶ ನಮಗೇನು ಮಾಡಿದೆ ಎನ್ನುವುದ ಬದಲು ದೇಶಕ್ಕೆ ನವು ಏನು ಕೊಡುಗೆ ನೀಡಿದ್ದೇವೆ ಎಂಬುದನ್ನು ಆಲೋಚಿಸಿದಲ್ಲಿ ಆತ ಉತ್ತಮ ಪ್ರಜೆ ಎನಿಸಿಕೊಳ್ಳುತ್ತಾನೆ. ಈ ನಿಟ್ಟಿನಲ್ಲಿ ನಿಮ್ಮ ವಿದ್ಯೆಯನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿ ಎಂದು ಕಿವಿಮಾತು ಹೇಳಿದರು.
ಇಂದು ಭ್ರಷ್ಟಾಚಾರ ಎಂಬುದು ಎಲ್ಲ ಕ್ಷೇತ್ರಗಳಲ್ಲಿ ಕಾಣುತ್ತಿದೆ. ಅದು ವೈದ್ಯಕೀಯ ಕ್ಷೇತ್ರವನ್ನೂ ಬಿಟ್ಟಿಲ್ಲ ಎಂಬುದು ನೋವಿನ ಸಂಗತಿ. ನಾನು ನ್ಯಾಯಾಧೀಶನಾಗಿ ಕೆಲ ಪ್ರಕರಣಗಳನ್ನು ಗಮನಿಸಿದಂತೆ ಕೆಲ ವೈದ್ಯರು ನಕಲಿ ಪ್ರಮಾಣ ಪತ್ರ ನೀಡುವುದನ್ನು ಕಂಡಿದ್ದೇನೆ.
ಅಪಘಾತದ ಸಂದರ್ಭದಲ್ಲಿ ಏನೂ ಆಗದವನಿಗೆ ನಾಲ್ಕಾರು ಕಡೆ ಮೂಳೆ ಮುರಿದಿದೆ ಎಂದು ಪ್ರಮಾಣಪತ್ರ ನೀಡಿರುವ ಸಾಕಷ್ಟು ಪ್ರಕರಣಗಳನ್ನು ಕಂಡಿದ್ದೇನೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಸಮಾಜವನ್ನು ಸರಿದಾರಿಯಲ್ಲಿ ಕೊಂಡೊಯ್ಯವ ಜವಾಬ್ದಾರಿ ಎಲ್ಲರ ಮೇಲಿದೆ ಎಂಬುದನ್ನು ಯುವ ಪೀಳಿಗೆ ಅರಿಯಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನ ಸಂಸ್ಥೆಯ ಉಪ ಕುಲಪತಿ ಡಾ.ಸುರೀಂದ್ರಸಿಂಗ್, ಕುಲಸಚಿವ ಡಾ.ಬಿ.ಮಂಜುನಾಥ್, ಪ್ರಾಂಶುಪಾಲ ಡಾ.ಬಸವನಗೌಡಪ್ಪ, ಡಾ.ಅರುಣ್, ಡಾ.ಚಂದ್ರಕುಮಾರ್ ಮುಂತಾದವರು ಹಾಜರಿದ್ದರು.
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…
ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ…
ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…
ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…
ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…