ಮಂಡ್ಯ: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತಾ ಪಿ.ಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಯತಿರಾಜ ಜಿಯರ್ ಅವರಿಗೆ ಇತ್ತೀಚೆಗೆ ಪಿ ಎಫ್ ಐ ಸಂಘಟನೆ ವಿಡಿಯೋ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಿರುವ ಸುದ್ದಿ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.
ಯದುಗಿರಿ ಯತಿರಾಜ ಮಠದ ಯತಿರಾಜ ಜಿಯರ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶಾಖಾ ಮಠದಲ್ಲಿ ವಾಸವಾಗಿದ್ದು ಮೇಲುಕೋಟೆ ವೈರಮುಡಿ, ಶ್ರೀ ರಾಮಾನುಜ ತಿರುನಕ್ಷತ್ರ ಸೇರಿದಂತೆ ವಿಶೇಷ ದಿನಗಳಲ್ಲಿ ಮಾತ್ರ ಮೇಲುಕೋಟೆಗೆ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಿದ್ದರು.
ಕಾಶ್ಮೀರದಲ್ಲಿ ಶ್ರೀ ಶಂಕರಾಚಾರ್ಯರು ಮತ್ತು ಶ್ರೀ ರಾಮಾನುಜಾಚಾರ್ಯರು ಸಂಚಾರ ಮಾಡಿದ್ದರಿಂದ ಶೃಂಗೇರಿ ಮಠದ ವತಿಯಿಂದ ಅಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ, ಯತಿರಾಜ ಜಿಯರ್ ಅವರು ಭಾರತ ಸರ್ಕಾರದ ಅನುಮತಿ ಮೇರೆಗೆ ಅಲ್ಲಿಗೆ ತೆರಳಿ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ಆ ಸಮಯದಲ್ಲಿ ಕಾಶ್ಮೀರ ಸರಸ್ವತಿಯ ನೆಲೆವೀಡು. ಭಾರತದ ಅವಿಭಾಜ್ಯ ಅಂಗ ಎಂದು ರಾಮಾನು ಜಿಯರ್ ಹೇಳಿದ್ದರು.
ಈ ಮಾತಿನಿಂದ ಕೆರಳಿದ ಪಿ ಎಫ್ ಐ ಸಂಘಟನೆ ಅವರಿಗೆ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಕರೆ ಹಾಕಿದೆ ಎಂದು ಹೇಳಲಾಗಿದೆ.
ಈ ಕಾರಣದಿಂದ ರಾಮಾನುಜ ಜಿಯರ್ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ಭಾರತ ಸರ್ಕಾರ ಸೂಚಿಸಿದೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…