ಮೈಸೂರು : .(ಕರ್ನಾಟಕ ವಾರ್ತೆ):– ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಬಿ, ೩ಎ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಮೆಟ್ರಿಕ್ ನಂತರದ ಸ್ನಾತಕೊತ್ತರ ಪದವಿ ಕೋರ್ಸ್ ವಿದ್ಯಾರ್ಥಿಗಳಿಗೆ ೨೦೨೨-೨೩ ನೇ ಸಾಲಿಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ೨೦೨೨ರ ನವೆಂಬರ್ ೨೨ ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವಯೋಮಿತಿ ೧೬ ರಿಂದ ೨೬ ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಜಿಲ್ಲಾ ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೦೮೦-೮೦೫೦೩೭೦೦೦೬ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆುಂಲ್ಲಿ ತಿಳಿಸಿದ್ದಾರೆ.





