ಜಿಲ್ಲೆಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

ಮೈಸೂರು : .(ಕರ್ನಾಟಕ ವಾರ್ತೆ):– ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಬಿ, ೩ಎ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಮೆಟ್ರಿಕ್ ನಂತರದ ಸ್ನಾತಕೊತ್ತರ ಪದವಿ ಕೋರ್ಸ್ ವಿದ್ಯಾರ್ಥಿಗಳಿಗೆ ೨೦೨೨-೨೩ ನೇ ಸಾಲಿಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ೨೦೨೨ರ ನವೆಂಬರ್ ೨೨ ರ ಒಳಗಾಗಿ ಅರ್ಜಿಯನ್ನು  ಸಲ್ಲಿಸಲು ತಿಳಿಸಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವಯೋಮಿತಿ ೧೬ ರಿಂದ ೨೬ ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಜಿಲ್ಲಾ ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್  ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೦೮೦-೮೦೫೦೩೭೦೦೦೬ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆುಂಲ್ಲಿ ತಿಳಿಸಿದ್ದಾರೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago