Mysore
34
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

ಮೈಸೂರು : ಮೇಯರ್‌ ಚುನಾವಣೆ – ಕಾಂಗ್ರೆಸ್‌ ಜೊತೆ ಮೈತ್ರಿ ಇಲ್ಲ : ಸಾ.ರಾ.ಮಹೇಶ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದ ಜೊತೆಗೆ ನಮ್ಮ ಮೈತ್ರಿ ಇಲ್ಲ ಎಂದು ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಅವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸಾಲಿನ ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಯಲ್ಲಿ ಜೆಡಿಎಸ್‌ ಗೆ ಸ್ಥಾನ ಸಿಗಲಿದ್ದು, ಕಾಂಗ್ರೆಸ್‌ ಪಕ್ಷದವರ ಜೊತೆ ನಮಗೆ ಮೈತ್ರಿ ಬೇಡ ಹಾಗೂ ಅವರ ಜೊತೆಗಿನ ಧೋರಣೆಯಿಂದಾಗಿ ನಾವು ಬೇಸತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ :  6 ರಂದು  ಚುನಾವಣೆ

ಪಾಲಿಕೆ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಮಧ್ಯಾಹ್ನ 12 ರ ವೇಳೆಗೆ ಚುನಾವಣೆ ನಡೆಸಲಿದ್ದು ಈ ಬಗ್ಗೆ ಪ್ರಾದೇಶಿಕ ಆಯುಕ್ತರಿಂದ ಅಧಿಕೃತ ಆದೇಶ ಬಂದಿದೆ. ಮೇಯರ್ ಚುನಾವಣೆ ಜೊತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೂ ಕೂಡ ಚುನಾವಣೆ ನಡೆಯಲಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ