Mysore
17
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಸೇನಾಪಡೆ ಮುಖಂಡರಿಂದ ಅರೆಬೆತ್ತಲೆ ಪ್ರತಿಭಟನೆ

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ಮುಖಂಡರು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿ ಭವನದ ಮುಖ್ಯದ್ವಾರದ ಮುಂಭಾಗದಲ್ಲಿ ಜಮಾಯಿಸಿದ್ದ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ನಗರದ ಜೋಡಿರಸ್ತೆಯನ್ನು ಅವೈಜ್ಞಾನಿವಾಗಿ ನಿರ್ಮಾಣ ಮಾಡಿರುವ ಕಾರಣದಿಂದ ಮಳೆ ಬಂದರೆ ಈ ರಸ್ತೆಯು ಜಲಾವೃತವಾಗಿ ತೊಂದರೆ ಉಂಟಾಗುತ್ತದೆ ಎಂದು ದೂರಿದರು.
ರಸ್ತೆ ಬದಿಯ ಬಾಬು ಜಗಜೀವನರಾಂ ಬಡಾವಣೆ, ಸೋಮಣ್ಣ ಲೇಔಟ್, ರೈಲ್ವೆ ಬಡಾವಣೆ, ಇತರ ಬಡಾವಣೆ ಜಲಾವೃತ್ತಗೊಂಡು ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಜಿಲ್ಲಾಡಳಿತ ಜಾಣಕುರುಡತ ತೋರುತ್ತಿದೆ ಎಂದು ಆರೋಪಿಸಿದರು.
ಸಂತ್ರಸ್ತರಿಗೆ ಸೂಕ್ತ ಪರಿಹಾರ ವಿತರಸಬೇಕು. ಸರ್ಕಾರ, ಜಿಲ್ಲಾಡಳಿತ ಇನ್ನೂ ೧೫ ದಿನಗಳೊಳಗೆ ಜೋಡಿರಸ್ತೆಯಲ್ಲಿ ಮಳೆನೀರು ನಿಲ್ಲದಂತೆ ಕ್ರಮಕೈಗೊಳ್ಳದಿದ್ದರೆ ಚಾಮರಾಜನಗರ ಬಂದ್ ಗೆ ಕರೆ ನೀಡುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕನ್ನಡ ಚಳವಳಿಗಾರರರಾದ ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ಮರಿಯಾಲದಹುಂಡಿ ಕುಮಾರ್, ಕೆ.ಎಂ.ನಾಗರಾಜು, ಗು.ಪುರುಷೋತ್ತಮ್, ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ಚಾ.ಸಿ.ಗುರುಸ್ವಾಮಿ, ಆಕಾಶ್ ಇತರರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!