ನಿನ್ನೆ ( ಜನವರಿ 28 ) ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಗೀತೋತ್ಸವವನ್ನು ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿತ್ತು. ಈ ಸಂಗೀತ ಸಂಜೆಯಲ್ಲಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ವೇದಿಕೆ ಪ್ರದರ್ಶನ ನೀಡಿದರು.
ತಮ್ಮ ಸಂಯೋಜನೆಯ ಸೂಪರ್ ಹಿಟ್ ಹಾಡು, ದರ್ಶನ್ ನಟನೆಯ ʼರಾಮ ನಾಮ ಹಾಡಿರೋ ರಾಮ ಬರುವನುʼ ಅನ್ನು ಅರ್ಜುನ್ ಜನ್ಯ ಹಾಡಲು ಶುರು ಮಾಡಿದರು. ಹೀಗೆ ಹಾಡು ಆರಂಭವಾಗುತ್ತಿದ್ದಂತೆ ಕಾರ್ಯಕ್ರಮದಿಂದ ಪಶುಪಾಲನೆ ಹಾಗೂ ರೇಷ್ಮೆ ಸಚಿವ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮದಿಂದ ಹೊರನಡೆದಿದ್ದಾರೆ. ಸಚಿವರು ಹೀಗೆ ಕಾರ್ಯಕ್ರಮದಿಂದ ಹೊರನಡೆದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ರಾಮನ ಹಾಡು ಹಾಡಿದ್ದಕ್ಕೆ ಹೊರನಡೆದ್ರಾ ಎಂಬ ಪ್ರಶ್ನೆ ಹಾಗೂ ಆಕ್ರೋಶವನ್ನು ನೆಟ್ಟಿಗರು ಹೊರಹಾಕಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…