ಜಿಲ್ಲೆಗಳು

ಕನ್ನಡದ ಹಿರಿಮೆ ಉಳಿಸಲು ಸಚಿವ ಎಸ್ ಟಿಎಸ್ ಕರೆ

ಮೈಸೂರು:ಕರ್ನಾಟಕವೆಂದರೆ ಕೇವಲ ಗಡಿ ರೇಖೆಯ ಒಳಗೆ ಸೀಮಿತವಾದ ಒಂದು ಭೌಗೋಳಿಕ ಪ್ರದೇಶವಲ್ಲ. ಅದು ಒಟ್ಟಾರೆ ರಾಷ್ಟ್ರೀಯ ಸಂಸ್ಕೃತಿಯನ್ನು, ಕನ್ನಡದ ಸ್ವಂತ ವ್ಯಕ್ತಿತ್ವದ ಹಿನ್ನೆಲೆಯಲ್ಲಿ ಪ್ರತಿಪಾದಿಸುವ ಅತ್ಯುನ್ನತವಾದ ಭಾವ. ಕರ್ನಾಟಕದ ಹಿರಿಮೆಗೆ ಕುಂದು ಬಾರದಂತೆ ನಾವೆಲ್ಲರೂ ನೋಡಿಕೊಳ್ಳಬೇಕಿದೆ ಎಂದು ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದರು.
ಮೈಸೂರು ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ನಾಡು ಏಕೀಕರಣಗೊಂಡ ಬಗ್ಗೆ ಇರುವ ದೀರ್ಘ ಚರಿತ್ರೆಯಂತೆ ‘ಕರ್ನಾಟಕ’ ಎಂಬ ಹೆಸರಿನ ನಾಮಕರಣಕ್ಕೂ ತನ್ನದೇ ಆದ ಚರಿತ್ರೆ ಇದೆ. ಅನೇಕರ ಒತ್ತಾಸೆಯಂತೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸುರವರ ಸಮ್ಮುಖದಲ್ಲಿ ೧೯೭೩ ರ ನವೆಂಬರ್ ೧ ರಂದು ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಲಾಯಿತು. ಕರ್ನಾಟಕದ ಇಂದು ಭಾರತದ ಅಭಿವೃದ್ಧಿ ನಕ್ಷೆಯಲ್ಲಿ ಅಗ್ರ ಪಂಕ್ತಿಯಲ್ಲಿದೆ. ದೇಶದ ಒಟ್ಟಾರೆ ಆರ್ಥಿಕ ವರಮಾನದಲ್ಲಿ ನಮ್ಮ ರಾಜ್ಯದ್ದೇ ಸಿಂಹಪಾಲು. ಮಾಹಿತಿ ತಂತ್ರಜ್ಞಾನದ ದಿಗ್ಗಜರು ನಾವು. ಶೈಕ್ಷಣಿಕವಾಗಿ ರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿರುವ ನಾಡು ನಮ್ಮದು. ವಿಜ್ಞಾನಿಗಳ ಕರ್ಮಭೂಮಿ ನಮ್ಮ ಕರ್ನಾಟಕ ಎಂದರು.

ನಮ್ಮ ಮಕ್ಕಳು ತಮ್ಮ ಭವಿಷ್ಯದ ಹಾದಿ ಕಂಡುಕೊಳ್ಳಲು ಭಾಷೆಗಳು ನೆರವಾಗಬೇಕು. ನಾವು ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳುವುದರ ಜತೆಗೆ ಇತರ ಭಾಷೆ, ಸಂಸ್ಕೃತಿಗಳನ್ನು ನಮ್ಮದಾಗಿಸಿಕೊಳ್ಳಬೇಕಿದೆ. ಜಾಗತೀಕರಣದ ಹಿನ್ನೆಲೆಯಲ್ಲಿ ಇಂಗ್ಲಿಷ್ ಭಾಷಾ ಜ್ಞಾನ ಅವಶ್ಯಕವಾಗಿದ್ದರೂ ಮಾತೃ ಭಾಷೆ ಕನ್ನಡಕ್ಕೆ ಮೊದಲ ಆದ್ಯತೆ. ನಮ್ಮ ಶಿಕ್ಷಣ ನೀತಿಯೂ ಮಾತೃ ಭಾಷೆಗೆ ಹೆಚ್ಚಿನ ಒತ್ತನ್ನು ನೀಡಿದ್ದರೂ ಕನ್ನಡ ಭಾಷೆಯನ್ನು ಉಳಿಸಿಕೊಳ್ಳುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ ಎಂದರು.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಸರ್ಕಾರ ಕೈಗೊಂಡಿದ್ದು, ಕನ್ನಡ ಭಾಷೆಯ ಸೊಗಡನ್ನು ಉಳಿಸಿಕೊಂಡು ಅದನ್ನು ಇನ್ನೂ ಹೆಚ್ಚಿಸುವ ಕೆಲಸದಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಮೂಲಕ ಕನ್ನಡ ನಾಡು ನುಡಿ ಸಂಸ್ಕೃತಿ ಭಾಷೆಯ ಸಿರಿಯನ್ನು ಹೆಚ್ಚಿಸಿ ಪಸರಿಸುವ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರಾಜ್ಯೋತ್ಸವ ಸಂದರ್ಭದಲ್ಲಿ ಆಯೋಜಿಸಲಾದ ‘ಮಾತಾಡ್ ಮಾತಾಡ್ ಕನ್ನಡ’ ಕೋಟಿ ಕಂಠ ಗಾಯನದಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂಪೂರ್ಣ ಕನ್ನಡಮಯ ವಾತಾವರಣವನ್ನು ಸೃಷ್ಟಿಸಲಾಗಿದೆ ಎಂದವರು ತಿಳಿಸಿದರು.
ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಿದ ಕನ್ನಡ ನಾಡು ಇಂದು, ಮುಂದು, ಎಂದೆಂದೂ ಎಲ್ಲಾ ಜಾತಿ, ಧರ್ಮ, ಶ್ರದ್ಧೆಗಳ ಜನರೂ ಸಾಮರಸ್ಯದಿಂದ ಬದುಕುವ ಒಂದು ಸುಂದರ ತೋಟವಾಗಿಯೇ ಉಳಿಯಬೇಕು ಎಂದು ಹೇಳಿದರು.

ಶಾಸಕರುಗಳಾದ ನಾಗೇಂದ್ರ, ರಾಮದಾಸ್, ತನ್ವೀರ್ ಸೇಠ್, ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಜಿಪಂ ಸಿಇಒ ಪೂರ್ಣಿಮಾ, ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಭಾಗವಹಿಸಿದ್ದರು.

andolana

Recent Posts

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

8 mins ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

56 mins ago

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

3 hours ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…

3 hours ago

ಬಿಜೆಪಿ ಸಂಸದರಿಂದ ನನ್ನ ಮೇಲೆ ಹಲ್ಲೆ ಆಗಿದೆ: ಸ್ಪೀಕರ್‌ಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸಂಸತ್‌ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…

3 hours ago

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

3 hours ago