ಚಾಮರಾಜನಗರ: ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇರೆಗೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಮುಖ್ಯ ಪೇದೆ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ.
ಹನೂರು ತಾಲ್ಲೂಕಿನ ಮಹಿಳೆಯೊಬ್ಬರನ್ನು ಮುನಿಯಪ್ಪ ವಸತಿಗೃಹಕ್ಕೆ ಕರೆದುಕೊಂಡು ಹೋಗಿ ಅಶ್ಲೀಲವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಅಮಾನತು ಪಡಿಸಲಾಗಿದೆ.
ಅಶ್ಲೀಲ ವರ್ತನೆ ನಂತರ ಅಸ್ವಸ್ಥಗೊಂಡ ಮಹಿಳೆಗೆ ಚಿಕಿತ್ಸೆ ನೀಡಿದ್ದ ನಗರದ ಸಿಮ್ಸ್ ವೈದ್ಯರು, ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಸಂಬಂಧ ಮಹಿಳೆ ದೂರು ನೀಡಿಲ್ಲವಾದರೂ ಆಸ್ಪತ್ರೆಯಿಂದ ಠಾಣೆಗೆ ಬಂದ ಎಂಎಲ್‌ಸಿ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅವರು ಮುನಿಯಪ್ಪ ಅವರನ್ನು ಶನಿವಾರ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. 3 ದಿನಗಳ ಹಿಂದೆ ಮಹಿಳೆ ಸಿಮ್ಸ್ ಆಸ್ಪತ್ರೆಗೆ ಬಂದಿದ್ದರು. ಮಹಿಳೆ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವೈದ್ಯರು ನಗರದ ಠಾಣೆಗೆ ಮಾಹಿತಿ ನೀಡಲಾಗಿ ವಿಚಾರ ಗೊತ್ತಾಗಿದೆ.





