ಮೈಸೂರು: ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಡೆದ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಹಾಪೌರ ಶಿವಕುಮಾರ್ ಹಾಗೂ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ವೇದಿಕೆಯಲ್ಲಿ ಸ್ಥಾನ ಕಲ್ಪಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ. ಜೊತೆಗೆ ವೇದಿಕೆಯಲ್ಲಿ ಮೈಸೂರಿನ ಯಾವ ಜನಪ್ರತಿನಿಧಿಗೂ ಮನ್ನಣೆಯನ್ನು ನೀಡದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ನಿನ್ನೆತನಕವೂ ವೇದಿಕೆಯಲ್ಲಿ ಮಹಾಪೌರರು, ಸ್ಥಳೀಯ ಶಾಸಕರು ಕೂರಲು ಅವಕಾಶ ಇದೆಯೆಂದು ಹೇಳಿಕೊಂಡು ಬರಲಾಗಿತ್ತು. ಹೀಗಿದ್ದರೂ ಅಂತಿಮ ಕ್ಷಣದಲ್ಲಿ ರಾಷ್ಟ್ರಪತಿ ಕಾರ್ಯಾಲಯದಿಂದ ಆಗಮಿಸಿದ್ದ ಅಧಿಕಾರಿಗಳ ನಡೆಯಿಂದ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಇದರೊಟ್ಟಿಗೆ ಜಿಲ್ಲಾಧಿಕಾರಿಗಳು, ಸ್ಥಳೀಯ ಅಧಿಕಾರಿಗಳು ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯುವಂತೆ ನೋಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆದರೂ, ಅದರಲ್ಲಿ ಮೈಸೂರು ನಗರದ ಪ್ರಥಮ ಪ್ರಜೆ ಮಹಾಪೌರ ಹಾಗೂ ಸ್ಥಳೀಯ ಶಾಸಕರಿಗೆ ಮಾನ್ಯತೆ ನೀಡಬೇಕು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕರೇವಹಿಸಬೇಕು. ಆದರೆ, ಮಹಾಪೌರ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಬೇಕಾದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರನ್ನು ವೇದಿಕೆಯಿಂದ ದೂರವಿಡಲಾಗಿತ್ತು. ವೇದಿಕೆ ಮುಂಭಾಗದಲ್ಲಿ ಶಾಸಕರಿಗೆ, ಸಂಸದರಿಗೆ, ವಿಧಾನಪರಿಷತ್ ಸದಸ್ಯರು, ವಿವಿಧ ನಿಗಮಮಂಡಳಿಗಳ ಅಧ್ಯಕ್ಷರಿಗೆ ಆಸನದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ, ಹಾಗೂ ಶಾಸಕ ಜಿ.ಟಿ.ದೇವೇಗೌಡರು ಕೂರುವಂತಾಯಿತು. ಇದರಿಂದಾಗಿ ಮೈಸೂರಿನ ದಸರಾದ ಉದ್ಘಾಟನೆಗೆ ಮೈಸೂರಿನ ಯಾವ ಜನಪ್ರತಿನಿಧಿಗೂ ಅವಕಾಶವೇ ಇಲ್ಲದಂತಾಯಿತು. ಇದರಿಂದಾಗಿ ಅಸಮಾಧಾನಗೊಂಡ ಮಹಾಪೌರರು ಕಾರ್ಯಕ್ರಮದ ಮಧ್ಯೆ ಅಲ್ಲಿಂದ ಎದ್ದು ಹೋದರು. ಕಾರ್ಯಕ್ರಮ ಆರಂಭಕ್ಕೂ ಮುನ್ನಾ ವೇದಿಕೆಯಲ್ಲಿ ೧೩ ಆಸನಗಳನ್ನು ಹಾಕಲಾಗಿತ್ತು. ಆ ನಂತರ ಐದು ಆಸನಗಳನ್ನು ಅಲ್ಲಿಂದ ತೆಗೆದು ಹಾಕಲಾಯಿತು. ಹೀಗಾಗಿ ವೇದಿಕೆಯಲ್ಲಿ ರಾಷ್ಟ್ರಪತಿಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್‌ರಿಗೆ ಮಾತ್ರ ಆಸನವನ್ನು ಹಾಕಲಾಗಿತ್ತು. ರಾಷ್ಟ್ರಪತಿ ಬಂದಾಗ ಶಿಷ್ಟಾಚಾರದಂತೆ ರಾಜ್ಯಪಾಲರು ಇರಬೇಕು. ಉಳಿದಂತೆ ಸಿಎಂ (ಹಾವೇರಿ), ಸಚಿವ ಎಸ್.ಟಿ.ಸೋಮಶೇಖರ್ (ಯಶವಂತಪುರ), ವಿ.ಸುನಿಲ್ ಕುಮಾರ್ (ಉತ್ತರಕನ್ನಡ), ಶೋಭಾ ಕರಂದ್ಲಾಜೆ (ಚಿಕ್ಕಮಗಳೂರು), ಪ್ರಲ್ಹಾದ್ ಜೋಶಿ (ಹುಬ್ಬಳ್ಳಿ) ಜಿಲ್ಲೆಗೆ ಸೇರಿದವರಾಗಿದ್ದರಿಂದ ಮೈಸೂರಿಗರೊಬ್ಬರೂ ವೇದಿಕೆಯಲ್ಲಿ ಇರಲಿಲ್ಲ.
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…
ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…
ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…